ಜೆಎನ್'ಯು ಅತ್ಯಾಚಾರ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ನಡೆದಿದೆ ಎನ್ನಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗೆ ದೆಹಲಿ ನ್ಯಾಯಾಲಯ...

ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ನಡೆದಿದೆ ಎನ್ನಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗೆ ದೆಹಲಿ ನ್ಯಾಯಾಲಯ ಗುರುವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಹೊತ್ತಿದ್ದ ಅನ್ಮೋಲ್ ರತನ್ ಎಂಬಾತ ಬುಧವಾರವಷ್ಟೇ ವಸಂತ್ ಕುಂಜ್ ನಾರ್ತ್ ಪೊಲೀಸ್ ಠಾಣೆಗೆ ಬಂದು ಪೊಲೀಸರ ಬಳಿ ಶರಣಾಗಿದ್ದ.
ಜೆಎನ್ ಯುನಲ್ಲಿ ವ್ಯಾಸಾಂಗ ಮಾಡುತ್ತಿದ್ದ 29 ವರ್ಷದ ಮಹಿಳೆಯೊಂದಿಗೆ ಗೆಳೆತನ ಹೊಂದಿದ್ದ ಅನ್ಮೋಲ್, ಆಕೆಗೆ ಬೇಕಾಗಿದ್ದ ಸಿನಿಮಾವೊಂದನ್ನು ನೀಡುವ ನೆಪದಲ್ಲಿ ಆಕೆಯ ರೂಮಿಗೆ ಹೋಗಿದ್ದಾನೆ. ನಂತರ ಪ್ರಜ್ಞೆ ತಪ್ಪಿಸುವ ಪಾನೀಯವನ್ನು ನೀಡಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆಂಬ ಆರೋಪಗಳು ಕೇಳಿಬಂದಿತ್ತು.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಅನ್ಮೋಲ್ ತಲೆ ಮರೆಸಿಕೊಂಡಿದ್ದ. ಅತ್ಯಾಚಾರ ಆರೋಪ ಹೊತ್ತ ನಂತರ ಅನ್ಮೋಲ್ ನನ್ನು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ನಿಂದ ಹೊರಹಾಕಲಾಗಿತ್ತು. ಅಲ್ಲದೆ, ಪೊಲೀಸರು ಅನ್ಮೋಲ್ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದ್ದರು. ಈ ಮಧ್ಯೆಯೇ ಅನ್ಮೋಲ್ ನಿನ್ನೆ ಪೊಲೀಸರಿಗೆ ಶರಣಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


