ಕೇರಳದಲ್ಲಿ ಆರ್ ಎಸ್ಎಸ್ ಕಾರ್ಯಕರ್ತನ ಮೇಲೆ ಬಾಂಬ್ ದಾಳಿ
ಕೇರಳದ ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತ ಪಿ.ಸುರೇಶ್(33) ಎಂಬುವವರ ಮೇಲೆ ಬಾಂಬ್ ದಾಳಿ ನಡೆದಿದ್ದು,...

Published On :
ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತ ಪಿ.ಸುರೇಶ್(33) ಎಂಬುವವರ ಮೇಲೆ ಬಾಂಬ್ ದಾಳಿ ನಡೆದಿದ್ದು, ದಾಳಿಯಲ್ಲಿ ಸುರೇಶ್ ಸೇರಿದಂತೆ ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಪಿಎಂ ಕಾರ್ಯಕರ್ತರು ಸುರೇಶ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇತರೆ ಮೂವರನ್ನು ದೀಪಕ್, ಅರುಣ್ ಮತ್ತು ಸಂತೋಷ್ ಎಂದು ಗುರುತಿಸಲಾಗಿದ್ದು, ಸುರೇಶ್ ಸೇರಿದಂತೆ ಎಲ್ಲಾ ಗಾಯಾಳುಗಳನ್ನು ತಲಸರಿ ಇಂಧಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕಣ್ಣೂರಿನ ಮೊಝಕ್ಕುಣ್ಣುನಲ್ಲಿ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


