ಆ.29 ರಂದು ಭಾರತಕ್ಕೆ ಭೇಟಿ ನೀಡಲಿರುವ ಯುಎನ್ 71 ನೇ ಅಧಿವೇಶನದ ಅಧ್ಯಕ್ಷ ಪೀಟರ್ ಥಾಮ್ಸನ್
ವಿಶ್ವಸಂಸ್ಥೆಯ 71 ನೇ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪೀಟರ್ ಥಾಮ್ಸನ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ

ಯುನೈಟೆಡ್ ನೇಷನ್ಸ್: ವಿಶ್ವಸಂಸ್ಥೆಯ 71 ನೇ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪೀಟರ್ ಥಾಮ್ಸನ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಫಿಜಿ ದೇಶದ ಪ್ರತಿನಿಧಿಯಾಗಿರುವ ಪೀಟರ್ ಥಾಮ್ಸನ್, ವಿಶ್ವಸಂಸ್ಥೆಯ ಮುಂಬರುವ 71 ನೇ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಚೀನಾಗೆ ಭೇಟಿ ನೀಡಿದ ಬಳಿಕ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್.29 ರಂದು ಭಾರತಕ್ಕೆ ಆಗಮಿಸಲಿರುವ ಪೀಟರ್ ಥಾಮ್ಸನ್, ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸ್ಥಿರ ಅಭಿವೃದ್ಧಿಗಾಗಿ 2030 ರ ಅಜೇಂಡಾ ಬಗ್ಗೆ ವಿಶ್ವ ಸಂಸ್ಥೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.
ವಿಶ್ವಸಂಸ್ಥೆಯ 71 ನೇ ಮಹಾಸಭೆಯ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು ಏಷ್ಯಾದ ಎರಡು ಪ್ರಮುಖ ರಾಷ್ಟ್ರಗಳಾದ ಭಾರತ- ಚೀನಾಗಳಿಗೆ ಭೇಟಿ ನೀಡಲು ಕಾತುರದಿಂದ ಇದ್ದೇನೆ ಎಂದು ಹೇಳಿದ್ದಾರೆ. ಕಳೆದ ಎರಡು ಮಹಾಸಭೆಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಮುಂಬರುವ ಮಹಾಸಭೆಯಲ್ಲಿ ಭಾಗವಹಿಸುತ್ತಿಲ್ಲ, ಪ್ರಧಾನಿ ನರೇಂದ್ರ ಮೋದಿ ಪರವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾಗವಹಿಸಲಿದ್ದಾರೆ. ವಿಶ್ವಸಂಸ್ಥೆಯ ಮುಂಬರುವ ಅಧಿವೇಶನ ಸಾಕಷ್ಟು ಸುಧಾರಣೆಗಳ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


