ದೇಶ

ಪಶ್ಚಿಮ ಬಂಗಾಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಹಲವರು ಸಿಲುಕಿರುವ ಶಂಕೆ

ಪಶ್ಚಿಮ ಬಂಗಾಳದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮಹಿಳೆ ಸಾವು, ಹಲವರು ಸಿಲುಕಿರುವ ಶಂಕೆ
ಪಶ್ಚಿಮ ಬಂಗಾಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ (ಸಾಂಧರ್ಭಿಕ ಚಿತ್ರ)
Published On :

ಕೋಲ್ಕತಾ: ಪಶ್ಚಿಮ ಬಂಗಾಳದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿರುವ ಬೆಹ್ರಂಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಅಲ್ಲದೆ  ಆಸ್ಪತ್ರೆಯಲ್ಲಿದ್ದ ಹಲವರು ಅಪಾಯದಲ್ಲಿ ಸಿಲುಕಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯ ಮೂರನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,  ಅದೇ ಅಂತಸ್ತಿನಲ್ಲೇ ಮಕ್ಕಳ ವಾರ್ಡ್ ಕೂಡ ಇದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಆಸ್ಪತ್ರೆಯ ಮಕ್ಕಳ ವಿಭಾಗದ ಮೇಲ್ವಿಚಾರಕಿ ಎಂದು ಗುರುತಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಪ್ರದೇಶಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ  ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, 5ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಆಗ್ನಿ ಅವಘಡಕ್ಕೆ  ಕಾರಣ ತಿಳಿದುಬಂದಿಲ್ಲವಾದರೂ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.