ದೇಶ

ಮುರ್ಷಿದಾಬಾದ್ ಅಗ್ನಿ ದುರಂತ: ತನಿಖೆಗೆ ಆದೇಶಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು...

ಮುರ್ಷಿದಾಬಾದ್ ಅಗ್ನಿ ದುರಂತ: ತನಿಖೆಗೆ ಆದೇಶಿಸಿದ ಮಮತಾ ಬ್ಯಾನರ್ಜಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published On :

ಕೋಲ್ಕತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಶನಿವಾರ ತನಿಖೆಗೆ ಆದೇಶಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿನ ಬೆಹ್ರಾಂಪುರ್ ವೈದ್ಯಕೀಯ ಆಸ್ಪತ್ರೆಯೊಂದರಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಈ ವರೆಗೂ ಮೂವರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈಗಾಗಲೇ ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದು, ಪೊಲೀಸರು, ಅಗ್ನಿಶಾಮಕ ದಳ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಶೀಘ್ರಗತಿಯಲ್ಲಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿನ ಕೊಠಡಿಯೊಂದರಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಿಂದಲೇ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.