ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇನ್ನೂ ಐವರು ನಾಯಕರ ವಿರುದ್ಧ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿಯವರು ಗಂಭೀರವಾದ ಆರೋಪವನ್ನು ಮಾಡಿದ್ದರು. ಅವ್ಯವಹಾರದಲ್ಲಿ ಸೋನಿಯಾ, ರಾಹುಲ್, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡೀಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಭಾಗಿಯಾಗಿದ್ದಾರೆಂದು ಹೇಳಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಮತ್ತು ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಇತರೆ ಸಂಸ್ಥೆ, ಕಾಂಗ್ರೆಸ್ ಪಕ್ಷದ 2010-11ನೇ ಸಾಲಿನ ದಾಖಲೆಗಳನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು.
ಇದರಂತೆ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯವು, ಎರಡು ವಾರಗಳೊಳಗಾಗಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೋನಿಯಾ, ರಾಹುಲ್ ಮತ್ತು ಐವರು ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


