ನವದೆಹಲಿ ಬಳಿ ಅಂತಾರಾಷ್ಟ್ರೀಯ ಮಟ್ಟದ ವಿವಿ ಪ್ರಾರಂಭಿಸಲಿರುವ ಬಾಬಾ ರಾಮ್ ದೇವ್
ಭಾರತದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯವನ್ನು ಸ್ಥಾಪನೆ ಮಾಡಲು ಯೋಗ ಗುರು ರಾಮದೇವ್ ಚಿಂತನೆ ನಡೆಸಿದ್ದಾರಂತೆ.

ನವದೆಹಲಿ: ಭಾರತದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯವನ್ನು ಸ್ಥಾಪನೆ ಮಾಡಲು ಯೋಗ ಗುರು ರಾಮದೇವ್ ಚಿಂತನೆ ನಡೆಸಿದ್ದಾರಂತೆ.
ವಿವಿಧ ಕ್ಷೇತ್ರಗಳಲ್ಲಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಬಾಬಾ ರಾಮ್ ದೇವ್ ಅವರ ಉದ್ದೇಶವಾಗಿದೆ. ಕೆಲವೊಂದು ವರದಿಗಳ ಪ್ರಕಾರ ವಿಶ್ವವಿದ್ಯಾನಿಲಯಕ್ಕಾಗಿ 1,500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಹೌಸ್ಟನ್ ವಿಶ್ವವಿದ್ಯಾನಿಲಯದ ಮಾದರಿಯಲ್ಲಿ ನವದೆಹಲಿ ಬಳಿ ಸುಮಾರು 25,000 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಲಾಗುತ್ತದೆ ಎಂದು ಬಾಬಾ ರಾಮ್ ದೇವ್ ತಿಳಿಸಿದ್ದಾರೆ. ಭಾರತದ ಪುರಾತನ ನಳಂದಾ- ತಕ್ಷಶಿಲಾ ವಿಶ್ವವಿದ್ಯಾನಿಲಯಗಳಂತೆ ಬಾಬಾ ರಾಮ್ ದೇವ್ ಪ್ರಾರಂಭಿಸಲಿರುವ ವಿವಿಯನ್ನು ಪ್ರಸಿದ್ಧಪಡಿ ಪಡೆಯುವಂತೆ ಮಾಡಲಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನು ಗುರುಕುಲ ಮಾದರಿಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಬಾಬಾ ರಾಮ್ ದೇವ್, ರಾಷ್ಟ್ರ ಹಾಗು ರಾಜ್ಯ ಮಟ್ಟದಲ್ಲಿ ವೈದಿಕ ಶಿಕ್ಷಣ ನೀಡುವ ಶಿಕ್ಷಣ ಮಂಡಳಿಯನ್ನು ಸ್ಥಾಪನೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗು ಮಾನವ ಸಂಪನ್ಮೂಲ ಇಲಾಖೆಗೆ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


