ದೇಶ

ಆರುಷಿ ಕೊಲೆ ಪ್ರಕರಣ: ನೂಪೂರ್ ತಲ್ವಾರ್ ಗೆ 3 ವಾರ ಪೆರೋಲ್

ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2008ರಲ್ಲಿ ನಡೆದ ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲು ಪಾಲಾಗಿರುವ...

ಆರುಷಿ ಕೊಲೆ ಪ್ರಕರಣ: ನೂಪೂರ್ ತಲ್ವಾರ್ ಗೆ 3 ವಾರ ಪೆರೋಲ್
ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್
Published On :
ನವದೆಹಲಿ: ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2008ರಲ್ಲಿ ನಡೆದ ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲು ಪಾಲಾಗಿರುವ ಆರುಷಿ ತಾಯಿ ನೂಪುರ್ ತಲ್ವಾರ್ ಗೆ ಅಲಹಬಾದ್ ಹೈಕೋರ್ಟ್ ಸೋಮವಾರ ಮೂರು ವಾರಗಳ ಕಾಲ ಪೆರೋಲ್ ನೀಡಿದೆ.
ತಮ್ಮ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಪೆರೋಲ್ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಅಪರಾಧಿಗೆ ತಾಯಿ ಭೇಟಿ ಮಾಡುವುದಕ್ಕಾಗಿ ಮೂರು ವಾರಗಳ ಪೆರೋಲ್ ಮಂಜೂರು ಮಾಡಿದೆ.
ನೂಪುರ್ ತಲ್ವಾರ್ ಹಾಗೂ ಆಕೆಯ ಪತಿ ರಾಜೇಶ್ ತಲ್ವಾರ್ ಇಬ್ಬರೂ ಜೋಡಿ ಕೊಲೆ ಪ್ರಕರಣ ಸಂಬಂಧ 2013ರಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
2008 ಮೇ 16ರಂದು 14ರ ಹರೆಯದ ಆರುಷಿ ನೋಯ್ಡಾದಲ್ಲಿರುವ ತಮ್ಮ ಮನೆಯಲ್ಲಿ ಹತ್ಯೆಗೀಡಾಗಿದ್ದಳು. ಈ ಹತ್ಯೆ ನಡೆದ ಮರುದಿನ ಮನೆಯ ಕೆಲಸದಾಳು ಹೇಮರಾಜ್ ಅವರ ಶವ ಮನೆಯ ಮಹಡಿ ಮೇಲೆ ಪತ್ತೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.