ದೇಶ

ಪಶ್ಚಿಮ ಬಂಗಾಳ ಬಾಂಗ್ಲಾ, ಬೆಂಗಾಲವಾಗಿ ಮರುನಾಮಕರಣ ಪ್ರಸ್ತಾವನೆಗೆ ವಿಧಾನಸಭೆ ಅಸ್ತು

ಪಶ್ಚಿಮ ಬಂಗಾಳವನ್ನು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆ ಸೋಮವಾರ ಆಂಗೀಕರಿಸಿದೆ....

ಪಶ್ಚಿಮ ಬಂಗಾಳ ಬಾಂಗ್ಲಾ, ಬೆಂಗಾಲವಾಗಿ ಮರುನಾಮಕರಣ ಪ್ರಸ್ತಾವನೆಗೆ ವಿಧಾನಸಭೆ ಅಸ್ತು
ಪಶ್ಚಿಮ ಬಂಗಾಳ ವಿಧಾನಸಭೆ
Published On :
ಕೋಲ್ಕತಾ: ಪಶ್ಚಿಮ ಬಂಗಾಳವನ್ನು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿದೆ.
ಎಎನ್ಐ ಸುದ್ದಿ ಸಂಸ್ಥೆಯ ಪ್ರಕಾರ, ಪಶ್ಚಿಮ ಬಂಗಾಳವನ್ನು ಬೆಂಗಾಲಿಯಲ್ಲಿ ಬಾಂಗ್ಲಾ ಎಂದು, ಇಂಗ್ಲಿಷ್ ನಲ್ಲಿ ಬೆಂಗಾಲ್ ಎಂದು ಹಾಗೂ ಹಿಂದಿಯಲ್ಲಿ ಬಂಗಾಲ್ ಎಂದು ಮರು ನಾಮಕರಣ ಮಾಡಲಾಗಿದೆ.
ಈ ಸಂಬಂಧ ಆಗಸ್ಟ್ 26ರಂದು ನಡೆದ ವಿಶೇಷ ಅಧಿವೇಶನದಲ್ಲಿ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಅಲ್ಲದೆ ಈ ಪ್ರಸ್ತಾವನೆಯನ್ನು ಸಂಸತ್ತಿನ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿಳಿಸಿದ್ದಾರೆ.
ಇಂಗ್ಲಿಷ್‍ನಲ್ಲಿ ಬಂಗಾಳ ಎಂದು ಕರೆಯಲಾಗುತ್ತದೆ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮತ್ತು ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಪ್ರಸ್ತಾವನೆಯನ್ನು ಮುಂದಿಡಲಾಗಿದೆ. ಈ ವಿಷಯದ ಬಗ್ಗೆ ಚರ್ಚಿಸಲು ಆಗಸ್ಟ್ 26ರಂದು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿತ್ತು.
2011ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈ ವಿಶಿಷ್ಟ ಯೋಚನೆ ಮಾಡಿ, ಮರುನಾಮಕರಣದ ವಿಷಯ ಕೈಗೆತ್ತಿಕೊಂಡಿದ್ದರು. ವಿಧಾನಸಭೆಯಲ್ಲಿ ಈ ಹೆಸರು ಬದಲಾವಣೆ ಪ್ರಸ್ತಾವನೆ ಆಂಗೀಕಾರವಾಗಿದ್ದು, ಈಗ ಸಂಸತ್ತಿನಿಂದ ಆಂಗೀಕಾರ ಪಡೆಯಬೇಕಾಗಿದೆ.
ಬಂಗಾಳಿ ಭಾಷೆಯಲ್ಲಿ ಈ ರಾಜ್ಯವನ್ನು ಈಗ ಪಶ್ಚಿಮ ಬಂಗಾಳ ಎಂದು ಕರೆಯಲಾಗುತ್ತದೆ. ಇದನ್ನು ಇಂಗ್ಲಿಷ್‍ನಲ್ಲಿ ವೆಸ್ಟ್ ಬೆಂಗಾಲ್ ಎಂದು ಕರೆಯುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.