ದೆಹಲಿ ಮಳೆ ಬಗ್ಗೆ ಹಾಸ್ಯ ಮಾಡಿದ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ
ನವದೆಹಲಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರತ ಪ್ರವಾಸದಲ್ಲಿರುವ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಮಳೆ ಬಗ್ಗೆ ಲಘು ಹಾಸ್ಯ ಮಾಡಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭಾರತ ಪ್ರವಾಸದಲ್ಲಿರುವ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಮಳೆ ಬಗ್ಗೆ ಲಘು ಹಾಸ್ಯ ಮಾಡಿದ್ದಾರೆ.
ಐಐಟಿ- ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಾನ್ ಕೆರ್ರಿ, ನೀವು ದೋಣಿಗಳಲ್ಲಿ ಬಂದಿದ್ದೀರಾ? ಎಂದು ವಿದ್ಯಾರ್ಥಿಗಳನ್ನು ಕೇಳಿದ್ದಾರೆ. ನೀವು ದೋಣಿಗಳಲ್ಲಿ ಬಂದಿದ್ದೀರಾ ಅಥವಾ ನೆಲ, ನೀರು ಎರಡರಲ್ಲೂ ಸಂಚರಿಸುವ ವಾಹನಗಳಲ್ಲಿ ಬಂದಿದ್ದೀರಾ ನನಗೆ ಗೊತ್ತಿಲ್ಲ. ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ನವದೆಹಲಿಯ ಐಐಟಿ ರಸ್ತೆಯಲ್ಲಿ ನೀರು ನಿಂತಿದ್ದು, ಕಾರ್ಯಕ್ರಮಕ್ಕೆ ತಡವಾಗಿ ಬಂದ ಜಾನ್ ಕೆರ್ರಿ ದೆಹಲಿಯ ಮಳೆ ಬಗ್ಗೆ ಲಘು ಧಾಟಿಯಲ್ಲಿ ಹಾಸ್ಯ ಮಾಡಿದ್ದಾರೆ, ನವದೆಹಲಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಾನ್ ಕೆರ್ರಿ ಭೇಟಿ ನೀಡಬೇಕಿದ್ದ ಮೂರೂ ಧಾರ್ಮಿಕ ಕೇಂದ್ರಗಳ ಭೇಟಿಯನ್ನು ರದ್ದುಪಡಿಸಿದ್ದಾರೆ. ಟ್ರಾಫಿಕ್ ನಲ್ಲಿ ಸಿಲುಕಿದ ಪರಿಣಾಮ ಕೆರ್ರಿ ತಮ್ಮ ಬೆಂಗಾವಲು ಪಡೆಯೊಂದಿಗೆ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳಲು ಸುಮಾರು ಒಂದು ಗಂಟೆ ಕಾದಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


