ಕಾನ್ಪುರ: ಹಾಸ್ಟೆಲ್ ಆಹಾರ ಸೇವಿಸಿ 100 ವಿದ್ಯಾರ್ಥಿಗಳು ಅಸ್ವಸ್ಥ, ನಾಲ್ವರ ಸ್ಥಿತಿ ಗಂಭೀರ
ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ ಪರಿಣಾಮ 100ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ...

ಕಾನ್ಪುರ: ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ನಡೆದಿದೆ.
ನಿನ್ನೆ ಮಧ್ಯಾಹ್ನ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡಿರುವ ನೂರು ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳ ಪರಿಸ್ಥಿತಿ ಇದೀಗ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾನ್ಪುರದ ಜಿಲ್ಲಾಡಳಿತದ ಅಧಿಕಾರಿಗಳು ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. ಹಾಸ್ಟೆಲ್ ನಲ್ಲಿ ತಯಾರಿಸಲಾದ ಆಹಾರವನ್ನು ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಹಾಸ್ಟೆಲ್ ನಲ್ಲಿ ಆಹಾರ ಸೇವಿಸುತ್ತಿದ್ದಂತೆ ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಅತಿಸಾರ ಭೇದಿಯಾಗಲು ಆರಂಭವಾಗಿತ್ತು. ಕೂಡಲೇ ಸ್ಥಳೀಯ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಇದರಂತೆ ನಾಲ್ವರ ಸ್ಥಿತಿ ತೀರಾ ಚಿಂತಾಜನಕವಾಗಿದ್ದು, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಲೇಜಿನಲ್ಲಿ ಈ ರೀತಿಯ ಘಟನೆಗಳು ಎಂದಿಗೂ ನಡೆದಿರಲಿಲ್ಲ. ಪ್ರಕರಣ ಸಂಬಂಧ ಎಲ್ಲಾ ಆಯಾಮದಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಆಹಾರ ತಯಾರಿಸುವಾಗ ಏನಾದರೂ ಬಿದ್ದಿರಬಹುದು ಎಂದು ಕಾಲೇಜು ಅಧಿಕಾರಿಗಳು ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


