ದೇಶ

ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮಗಳ ಮೇಲೆ ಹಲ್ಲೆಗೆ ಯತ್ನ: ಮೂವರ ಬಂಧನ

ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಪುತ್ರಿ ಲಿಖಿತಾ ದೀಕ್ಷಿತ್ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ ಮೂವರನ್ನು ...

ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮಗಳ ಮೇಲೆ ಹಲ್ಲೆಗೆ ಯತ್ನ: ಮೂವರ ಬಂಧನ
ಶೀಲಾ ದೀಕ್ಷಿತ್
Published On :

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಪುತ್ರಿ ಲತಿಕಾ ದೀಕ್ಷಿತ್ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಹೈಲೇ ರಸ್ತೆಯಲ್ಲಿರುವ ಉಪಸನಾ ಅಪಾರ್ಟ್ ಮೆಂಟ್ ನ ಹೊರಗೆ  ಲತಿಕಾ ಕಾಯುತ್ತಿದ್ದ ವೇಳೆ ಆರೋಪಿಗಳು ಆಕೆಯ ಮೇಲೆ ದಾಳಿ ನಡೆಸಲು ಸಂಚು ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ದೆಹಲಿ ಯುವ ಕಾಂಗ್ರೆಸ್ ಸದಸ್ಯ ಹಾಗೂ ಸಾಕೇತ್ ಮಾಜಿ ಶಾಸಕ ಟೆಕ್ ಚಂದ್ ಶರ್ಮಾ ಅವರ ಮೊಮ್ಮಗ ಶಶಿಕಾಂತ್ ಶರ್ಮಾ ಬಾರಕಂಬಾ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನವೆಂಬರ್ 17 ರಂದು ರಾತ್ರಿ 11.30 ರವೇಳೆ ಶಶಿಕಾಂತ್ ಶರ್ಮಾ ತಮ್ಮ ಸ್ನೇಹಿತರಾದ ಮನೀಶ್ ಚೌದರಿ ಜೊತೆ ಲತಿಕಾ ಮನೆಯಿಂದ ಹೊರಬರುವಾಗ ಸುಮಾರು 7 ಮಂದಿ ಗುಂಪು ಅನುಮಾನಾಸ್ಪದವಾಗಿ ಅಪಾರ್ಟ್ ಮೆಂಟ್ ನ ಮುಖ್ಯದ್ವಾರದಲ್ಲಿ ನಿಂತಿದ್ದರು ಎಂದು ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರು ಬರುವ ಮುನ್ನ ನಾಲ್ವರು ಆರೋಪಿಗಳು ಇಟಿಯೋಸ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಉಳಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.