ಟ್ವಿಟರ್ ಖಾತೆಯಷ್ಟೇ ಅಲ್ಲ ಕಾಂಗ್ರೆಸ್ ನ ಹಲವು ನಾಯಕರ ಇ-ಮೇಲ್ ಖಾತೆಗಳೂ ಹ್ಯಾಕ್!
ಕಾಂಗ್ರೆಸ್ ಪಕ್ಷದ ಹಾಗೂ ಅದರ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ಹ್ಯಾಕ್ ಆದ ಬೆನ್ನಲ್ಲೇ, ಕಾಂಗ್ರೆಸ್ ನ ಹಲವು ನಾಯಕರ ಇ-ಮೇಲ್ ಖಾತೆಗಳನ್ನೂ ಹ್ಯಾಕ್ ಮಾಡಲಾಗಿದೆ...

Published On :
ನವದೆಹಲಿ: ಕಳೆದ 24 ಗಂಟೆಗಳಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಗಳನ್ನು ಹಲವು ಬಾರಿ ಹ್ಯಾಕ್ ಮಾಡಲಾಗಿತ್ತು. ಈ ಬಗ್ಗೆ ದೂರು ದಾಖಲಿಸಿದ ಬೆನ್ನಲ್ಲೇ ಈಗ ಪಕ್ಷದ ನಾಯಕರ ಅಧಿಕೃತ ಇ-ಮೇಲ್ ಖಾತೆಯನ್ನೂ ಹ್ಯಾಕ್ ಮಾಡಲಾಗಿದೆಯಂತೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಪಕ್ಷ, ಹ್ಯಾಕ್ ಆಗಿರುವ ಸಂಬಂಧ ಸೂಕ್ತ ಕ್ರಮ ಜರುಗಿಸುವವರೆಗೂ ಕಾಂಗ್ರೆಸ್ ನಾಯಕರು ಇ-ಮೇಲ್ ಗಳನ್ನು ಬಳಸುವುದಿಲ್ಲ ಎಂದು ಹೇಳಿದೆ.
ಅಲ್ಲದೇ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ರ್ಕಮವಾಗಿ ಕಾಂಗ್ರೆಸ್ ತನಗೆ ಸಂಬಂಧಿಸಿದ ಅಥವಾ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ 200 ಟ್ವಿಟರ್ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ ಎಂದು ಸಿಎನ್ ಎನ್-ನ್ಯೂಸ್ 18 ವರದಿ ಮೂಲಕ ತಿಳಿದುಬಂದಿದೆ.
ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಗೆ ಕನ್ನ ಹಾಕುವ ಅಥವಾ ಪಕ್ಷದ ನಾಯಕರ ಇ-ಮೇಲ್ ಖಾತೆಗಳನ್ನು ಹ್ಯಾಕ್ ಮಾಡುವಂತಹ ತಂತ್ರಗಳಿಂದ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ರಾಹುಲ್ ಗಾಂಧಿ ಅವರ ಹೋರಾಟವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣ್ ದೀಪ್ ಸುರ್ಜೇವಾಲ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Rahul Gandhiರಾಹುಲ್ ಗಾಂಧಿTwitter Accountಟ್ವಿಟರ್ ಖಾತೆಹ್ಯಾಕ್Hackofficial email IDsಇ-ಮೇಲ್ ಖಾತೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


