ಟೋಲ್ ಪ್ಲಾಜಾಗಳಲ್ಲಿ ಸೇನೆ ನಿಯೋಜನೆಗೆ ಗರಂ: 36 ಗಂಟೆಗಳ ಬಳಿಕ ಕಚೇರಿ ತೊರೆದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಟೋಲ್ ಪ್ಲಾಜಾಗಳಲ್ಲಿ ಸೇನೆಯನ್ನು ನಿಯೋಜಿಸಿದ್ದ ಕಾರಣಕ್ಕೆ ತೀವ್ರವಾಗಿ ಕೆಂಡಮಂಡಲವಾಗಿ, ಕಚೇರಿಯಲ್ಲಿಯೇ ಉಳಿದುಕೊಂಡು ಪ್ರತಿಭಟಿಸಲು ಮುಂದಾಗಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 36 ಗಂಟೆಗಳ ದೀರ್ಘಕಾಲಿಕ...

ನವದೆಹಲಿ: ಪಶ್ಚಿಮ ಬಂಗಾಳದ ಟೋಲ್ ಪ್ಲಾಜಾಗಳಲ್ಲಿ ಸೇನೆಯನ್ನು ನಿಯೋಜಿಸಿದ್ದ ಕಾರಣಕ್ಕೆ ತೀವ್ರವಾಗಿ ಕೆಂಡಮಂಡಲವಾಗಿ, ಕಚೇರಿಯಲ್ಲಿಯೇ ಉಳಿದುಕೊಂಡು ಪ್ರತಿಭಟಿಸಲು ಮುಂದಾಗಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 36 ಗಂಟೆಗಳ ದೀರ್ಘಕಾಲಿಕ ಪ್ರತಿಭಟನೆಯ ಬಳಿಕ ಶುಕ್ರವಾರ ಸಂಜೆ ಮನೆಗೆ ಮರಳಿದ್ದಾರೆಂದು ತಿಳಿದುಬಂದಿದೆ.
ಮುರ್ಷಿದಾಬಾದ್, ಜಲ್ಪೈಗುಡಿ, ದಾರ್ಜಿಲಿಂಗ್, ಹೌರಾ, ಹೂಗ್ಲಿ ಸೇರಿದಂತೆ ಪಶ್ಚಿಮ ಬಂಗಾಳ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತು ಸಚಿವಾಲಯದ ಬಳಿಯಿರುವ ಟೋಲ್ ಪ್ಲಾಜಾಗಳಲ್ಲಿ ಸೇನಾ ಪಡೆಯನ್ನು ನಿಯೋಜನೆ ಮಾಡಲಾಗಿತ್ತು.
ಟೋಲ್ ಪ್ಲಾಜಾಗಳಲ್ಲಿ ಸೇನೆಯನ್ನು ನಿಯೋಜಿಸಿದ್ದ ಕಾರಣಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಸೇನೆ ಹಿಂತಿರುಗುವವರೆಗೂ ಯಾವುದೇ ಕಾರಣಕ್ಕೂ ಕಚೇರಿಯಿಂದ ಹೊರಬರುವುದಿಲ್ಲ. ಕಚೇರಿಯಲ್ಲಿಯೇ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇನೆಂದು ಹೇಳಿದ್ದರು. ಇದರಂತೆ 36 ಗಂಟೆಗಳ ಕಾಲ ಸುದೀರ್ಘ ಪ್ರತಿಭಟನೆ ನಡೆಸಿದ್ದ ಅವರು ನಿನ್ನೆ ಸಂಜೆ 6.20ರ ಸುಮಾರಿಗೆ ಮನೆಗೆ ಮರಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಮನೆಗೆ ಹಿಂತಿರುವ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವನ್ನು ಕತ್ತಲಿಗೆ ತಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಟೋಲ್ ಪ್ಲಾಜಾಗಳಲ್ಲಿ ಸೇನೆಯನ್ನು ನಿಯೋಜನೆಗೊಳಿಸಿದೆ. ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡದೆಯೇ ಸೇನೆಯನ್ನು ನಿಯೋಜನೆಗೊಳಿಸಲಾಗಿದೆ. ಇಷ್ಟೊಂದು ಸೊಕ್ಕಿನಲ್ಲಿರುವ ಸರ್ಕಾರವನ್ನು ನಾವೆಂದೂ ನೋಡಿರಲಿಲ್ಲ. ಸೇನಾಪಡೆಗಳು ಹಿಂತಿರುಗದಿದ್ದರೆ ರಾಜ್ಯ ಸರ್ಕಾರ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಭಾರತೀಯ ಸೇನೆ ಮೇಲೆ ನನಗೆ ಅಪಾರದವಾದ ಗೌರವವಿದೆ. ಆದರೆ, ರಾಜಕೀಯ ಕುತಂತ್ರಗಳಿಗಾಗಿ ಸೇನೆಯನ್ನು ಬಳಸಿಕೊಳ್ಳುತ್ತಿರುವುದು ನಿಜಕ್ಕೂ ಬೇಸರವನ್ನು ತರಿಸಿದೆ. ಒಂದು ಪ್ರದೇಶದಲ್ಲಿ ಮಾತ್ರ ಸಮರಾಭ್ಯಾಸ ಮಾಡುತ್ತೇವೆಂದು ಸೇನೆ ರಾಜ್ಯದ ಪೊಲೀಸರಿಗೆ ಮಾಹಿತಿ ನೀಡಿತ್ತು. ರಾಜ್ಯದ ಎಲ್ಲಾ ಟೋಲ್ ಪ್ಲಾಜಾಗಳಲ್ಲೂ ಸಮರಾಭ್ಯಾಸ ನಡೆಸುವುದಕ್ಕೆ ಅನುಮತಿ ನೀಡಿರಲಿಲ್ಲ. ಗುಜರಾತ್, ಮಹಾರಾಷ್ಟ್ರ, ಬಿಹಾರ, ಒಡಿಶಾ, ಜಾರ್ಖಾಂಡ್, ಪಂಜಾಬ್, ಕೇರಳ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ರೀತಿಯ ಸಮರಾಭ್ಯಾಸಗಳನ್ನು ಏಕೆ ನಡೆಸುವುದಿಲ್ಲ? ಕೇವಲ ಪಶ್ಚಿಮ ಬಂಗಾಳದಲ್ಲಿಯೇ ಏಕೆ ನಡೆಸಬೇಕು? ದೇಶಕ್ಕಾಗಿ ದನಿ ಎತ್ತುವ ಕಾರಣಕ್ಕೆ ಪಶ್ಚಿಮ ಬಂಗಾಳ ರಾಜ್ಯವನ್ನು ಮಾತ್ರ ಆಯ್ಕೆ ಮಾಡಲಾಗುತ್ತಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


