ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸಬೇಕು: ಡೇವಿಡ್ ಕ್ಯಾಮರಾನ್
ಭಾರತೀಯ ಕ್ರಿಕೆಟ್ ರಂಗದ ಜೀವಂತ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಬ್ಯಾಟಿಂಗ್ ತರಬೇತಿ...

Published On :
ನವದೆಹಲಿ: ಭಾರತೀಯ ಕ್ರಿಕೆಟ್ ರಂಗದ ಜೀವಂತ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಬ್ಯಾಟಿಂಗ್ ತರಬೇತಿ ಕೊಡಿಸಬೇಕು ಎಂದು ಬ್ರಿಟಿಷ್ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರಾನ್ ಹಾಸ್ಯಭರಿತ ಸಲಹೆ ನೀಡಿದ್ದಾರೆ.
ಭಾರತಕ್ಕೆ ಬೇಕಿರುವ ಬದಲಾವಣೆಯ ಸೂತ್ರಗಳು ಎಂಬ ವಿಚಾರ ಕುರಿತು ಮಾತನಾಡುತ್ತಿದ್ದ 50ರ ಹರೆಯದ ಕ್ಯಾಮರಾನ್ ಅವರು, ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಸದ್ಯದ ಮೂರು ಟೆಸ್ಟ್ ಪಂದ್ಯಗಳ ಪೈಕಿ ಎರಡರಲ್ಲಿ ಸೋತ್ತಿದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಇಂತಹ ದಯನೀಯ ಸ್ಥಿತಿಯಲ್ಲಿರುವ ತಂಡವನ್ನು ನೋಡಿದರೆ ತಂಡದ ಹೆಚ್ಚಿನ ತರಬೇತಿಗಾಗಿ ಸಚಿನ್ ತೆಂಡೂಲ್ಕರ್ ಅವರನ್ನು ಅಪಹರಿಸುವ ಅಗತ್ಯವಿದೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ನಾನು ಪ್ರತಿ ಸಾರಿ ಭಾರತಕ್ಕೆ ಬಂದಾಗಲೆಲ್ಲಾ ಇಲ್ಲಿನ ಅಭಿವೃದ್ಧಿ ಮತ್ತು ಸಾಮರ್ಥ್ಯವನ್ನು ಕಾಣುತ್ತೇನೆ. ಭಾರತದೊಂದಿಗೆ ಇಂಗ್ಲೆಂಡ್ ಹೊಂದಿರುವ ಐತಿಹಾಸಿಕ ಬಾಂಧವ್ಯವನ್ನು ಇದೇ ವೇಳೆ ಕ್ಯಾಮರಾನ್ ಹೊಗಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sachin Tendulkarಸಚಿನ್ ತೆಂಡೂಲ್ಕರ್ಅಪಹರಣkidnapDavid Cameronಡೇವಿಡ್ ಕ್ಯಾಮರಾನ್England cricket teamಇಂಗ್ಲೆಂಡ್ ಕ್ರಿಕೆಟ್ ತಂಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


