ನೋಟು ನಿಷೇಧ ಸಕಾರಾತ್ಮಕ ನಡೆ, ಲಾಭದತ್ತ ಮುನ್ನಡೆಸಲಿದೆ: ನಿತೀಶ್ ಕುಮಾರ್
ನರೇಂದ್ರ ಮೋದಿ ಅವರ ನೋಟು ನಿಷೇಧ ನಿರ್ಧಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೋಟು ನಿಷೇಧ ನಿರ್ಧಾರವನ್ನು ಸಕಾರಾತ್ಮಕ ನಡೆ ಎಂದು ಬಣ್ಣಿಸಿದ್ದಾರೆ.

Published On :
ಪಾಟ್ನಾ: ನರೇಂದ್ರ ಮೋದಿ ಅವರ ನೋಟು ನಿಷೇಧ ನಿರ್ಧಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೋಟು ನಿಷೇಧ ನಿರ್ಧಾರವನ್ನು ಸಕಾರಾತ್ಮಕ ನಡೆ ಎಂದು ಬಣ್ಣಿಸಿದ್ದಾರೆ.
ನೋಟು ನಿಷೇಧ ಕ್ರಮ ಸಕಾರಾತ್ಮಕ ನಡೆ, ಲಾಭದತ್ತ ಮುನ್ನಡ್ಮೆಸಲಿದೆ ಎಂದು ಹೇಳಿರುವ ನಿತೀಶ್ ಕುಮಾರ್, ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನೋಟು ನಿಷೇಧದ ಕ್ರಮವನ್ನು ವಿಪಕ್ಷಗಳು ವಿರೋಧಿಸುತ್ತಿದ್ದರೆ, ವಿಪಕ್ಷಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಾತ್ರ ನರೇಂದ್ರ ಮೋದಿ ಅವರ ನೋಟು ನಿಷೇಧ ಕ್ರಮವನ್ನು ಸ್ವಾಗತಿಸಿದ್ದಾರೆ.
ನೋಟು ನಿಷೇಧದ ನಿರ್ಧಾರವನ್ನು ಪ್ರಾರಂಭದಿಂದಲೂ ಬೆಂಬಲಿಸುತ್ತಿರುವ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಬೇನಾಮಿ ಆಸ್ತಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


