ಸೇನೆಗೆ ಅಪಖ್ಯಾತಿ ತರುವ ಕೆಲಸ ಬೇಡ: ದೀದಿ ವಿರುದ್ಧ ಪ.ಬ ರಾಜ್ಯಪಾಲ ಕಿಡಿ
ಭಾರತೀಯ ಸೇನೆ ಜವಾಬ್ದಾರಿಯುತ ಸಂಘಟನೆಯಾಗಿದ್ದು, ಸೇನೆಗೆ ಅಪಖ್ಯಾತಿ ತರುವ ಕೆಲಸವನ್ನು ಮಾಡಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳ ರಾಜ್ಯದ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು...

ಕೋಲ್ಕತಾ: ಭಾರತೀಯ ಸೇನೆ ಜವಾಬ್ದಾರಿಯುತ ಸಂಘಟನೆಯಾಗಿದ್ದು, ಸೇನೆಗೆ ಅಪಖ್ಯಾತಿ ತರುವ ಕೆಲಸವನ್ನು ಮಾಡಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳ ರಾಜ್ಯದ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ಶನಿವಾರ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಳದ ಟೋಲ್ ಪ್ಲಾಜಾಗಳ ಬಳಿ ಸೇನಾ ಪಡೆಯನ್ನು ನಿಯೋಜನೆ ಗೊಳಿಸಿದ್ದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿಯೇ 36 ಗಂಟೆಗಳ ಕಾಲ ಕುಳಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತೀಯ ಸೇನೆ ಜವಾಬ್ದಾರಿಯುತ ಸಂಘಟನೆಯಾಗಿದ್ದು, ಸೇನೆ ವಿರುದ್ಧ ಯಾವುದೇ ವ್ಯಕ್ತಿಯಾಗಿದ್ದರು, ಆರೋಪ ಮಾಡುವುದಕ್ಕೂ ಮುನ್ನ ಬಹಳ ಎಚ್ಚರಿಕೆ ವಹಿಸಬೇಕಿದೆ. ಸೇನೆಗೆ ಅಪಖ್ಯಾತಿ ತರುವಂತಹ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
ತಮ್ಮ ಪ್ರಾಣವನ್ನು ಒತ್ತೆಯಾಗಿಸಿರಿ ಮಮತಾ ಅವರ ಜೀವ ತೆಗೆಯಲು ಇಂಡಿಗೋ ಪೈಲಟ್ ಗಳೇನು ಅಲ್-ಖೈದಾ ಸಂಘಟನೆಯ ಕಾರ್ಯಕರ್ತರಲ್ಲ. ಪಾಕಿಸ್ತಾನ ಸೇನೆಯಂತಲ್ಲ ನಮ್ಮ ಭಾರತೀಯ ಸೇನೆ. ಹೀಗಾಗಿ ರಾಜಕೀಯದಲ್ಲಿ ಭಾರತೀಯ ಸೇನೆಯನ್ನು ಬಳಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


