ದೇಶ

ರಾಷ್ಟ್ರೀಯ ಮಟ್ಟದ ಮಹಿಳಾ ಶೂಟರ್ ಮೇಲೆ ಕೋಚ್ ನಿಂದಲೇ ಅತ್ಯಾಚಾರ; ಪೊಲೀಸ್ ದೂರು ದಾಖಲು

ರಾಷ್ಟ್ರೀಯ ಮಟ್ಟದ ಮಹಿಳಾ ಶೂಟರ್‌ ಮೇಲೆ ಆಕೆಯ ಕೋಚ್ ನಿಂದಲೇ ಅತ್ಯಾಚಾರವೆಸಗಿರುವ ಕುರಿತು ದೂರು ದಾಖಲಾಗಿದ್ದು, ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಮಟ್ಟದ ಮಹಿಳಾ ಶೂಟರ್ ಮೇಲೆ ಕೋಚ್ ನಿಂದಲೇ ಅತ್ಯಾಚಾರ; ಪೊಲೀಸ್ ದೂರು ದಾಖಲು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಷ್ಟ್ರೀಯ ಮಟ್ಟದ ಮಹಿಳಾ ಶೂಟರ್‌ ಮೇಲೆ ಆಕೆಯ ಕೋಚ್ ನಿಂದಲೇ ಅತ್ಯಾಚಾರವೆಸಗಿರುವ ಕುರಿತು ದೂರು ದಾಖಲಾಗಿದ್ದು, ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಿಳಾ ಶೂಟರ್ ಹೆಸರನ್ನು ಗೌಪ್ಯವಾಗಿರಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳಾ ಶೂಟರ್ ರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರವಾಗಿರುವುದು  ಸಾಬೀತಾಗಿದೆ ಎಂದು ಹೇಳಲಾಗುತ್ತಿದೆ.

ಮಹಿಳಾ ಶೂಟರ್ ಸಲ್ಲಿಕೆ ಮಾಡಿರುವ ದೂರಿನಲ್ಲಿ, "ಕಳೆದ 2 ವರ್ಷಗಳಿಂದಲೂ ನಾವಿಬ್ಬರು ಪರಿಚಿತರಾಗಿದ್ದು, ನನ್ನ ಮದುವೆಯಾಗುವುದಾಗಿ ಅವರು ನನ್ನನ್ನು ನಂಬಿಸಿದ್ದರು. ಇತ್ತೀಚೆಗೆ ಅವರು ನನ್ನನ್ನು ಮನೆಗೆ ಕರೆಯಿಸಿಕೊಂಡು  ನನಗೆ ಮತ್ತು ಬರುವ ಔಷಧಿಯನ್ನು ತಂಪು ಪಾನೀಯದಲ್ಲಿ ಬೆರೆಸಿ ಬಳಿಕ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ಶೂಟರ್ ಆರೋಪಿಸಿದ್ದಾರೆ.

ಪ್ರಸ್ತುತ ಕೋಚ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.