ದೇಶ

ದೇಶ ವಿರೋಧಿ ಹೇಳಿಕೆ; ಫಾರೂಕ್, ಒಮರ್ ಅಬ್ದುಲ್ಲಾ ವಿರುದ್ಧ ದೂರು ದಾಖಲು

ಕಾಶ್ಮೀರ ಹಿಂಸಾಚಾರದಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹಾಗೂ ಪಿಒಕೆ ಭಾರತದ ಅವಿಭಾಜ್ಯ ಅಂಗವಲ್ಲ ಎಂದಿದ್ದ ಫಾರೂಕ್ ಅಬ್ದುಲ್ಲಾ ವಿರುದ್ಧ ದೇಶ ವಿರೋಧಿ ಹೇಳಿಕೆ ನೀಡಿದ ಆರೋಪದಡಿ ದೂರು ದಾಖಲಾಗಿದೆ.

ದೇಶ ವಿರೋಧಿ ಹೇಳಿಕೆ; ಫಾರೂಕ್, ಒಮರ್ ಅಬ್ದುಲ್ಲಾ ವಿರುದ್ಧ ದೂರು ದಾಖಲು
ಸಂಗ್ರಹ ಚಿತ್ರ
Published On :

ಶ್ರೀನಗರ: ಕಾಶ್ಮೀರ ಹಿಂಸಾಚಾರದಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹಾಗೂ ಪಿಒಕೆ ಭಾರತದ ಅವಿಭಾಜ್ಯ ಅಂಗವಲ್ಲ ಎಂದಿದ್ದ  ಫಾರೂಕ್ ಅಬ್ದುಲ್ಲಾ ವಿರುದ್ಧ ದೇಶ ವಿರೋಧಿ ಹೇಳಿಕೆ ನೀಡಿದ ಆರೋಪದಡಿ ದೂರು ದಾಖಲಾಗಿದೆ.

ಕಾಶ್ಮೀರದ ಮಿರಾ ಸರಾಯ್ ಪ್ರಾಂತ್ಯದ ಬುಂಡುಖಾನ್ ಎಂಬುವವರು ನ್ಯಾಷನಲ್ ಕಾನ್ಫೆರನ್ಸ್ ಪಕ್ಷದ ಮುಖ್ಯಸ್ಥರಾದ ಫಾರೂಕ್ ಅಬ್ದುಲ್ಲಾ ಹಾಗೂ ಒಮರ್ ಅಬ್ದುಲ್ಲಾ ವಿರುದ್ಧ ದೂರು ದಾಖಲಿಸಿದ್ದು, ಪ್ರಚೋದನಕಾರಿ ಮತ್ತು ದೇಶ  ವಿರೋದಿ ಹೇಳಿಕೆ ನೀಡುವ ಮೂಲಕ ಹಿಂಸಾಚಾರಕ್ಕೆ ಎಡೆ ಮಾಡಿಕೊಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಕಳೆದ ನವೆಂಬರ್ 25ರಂದು ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಜಿದ್ದ ಫಾರೂಕ್ ಆಬ್ದುಲ್ಲಾ, ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಲ್ಲ ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದರು. ಅಲ್ಲದೆ ಭಾರತ ಸಂಸತ್ತು  ಪಿಒಕೆ ಭಾರತದ ಅವಿಭಾಜ್ಯ ಅಂಗ ಎಂಬ ನಿರ್ಣಯ ಕೈಗೊಂಡಿದ್ದ ನಿಲುವಳಿ ಕುರಿತಾಗಿಯೂ ಟೀಕೆ ಮಾಡಿದ್ದರು. ಇದಕ್ಕೆ ದೇಶವ್ಯಾಪಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅವರ ಮಗ ಮತ್ತು ಮಾಜಿ ಸಿಎಂ ಒಮರ್  ಅಬ್ದುಲ್ಲಾ ಕಾಶ್ಮೀರ ಹಿಂಸಾಚಾರದಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

ಈ ಎರಡೂ ಪ್ರಕರಣ ಸಂಬಂಧ ಕಾಶ್ಮೀರದಲ್ಲಿ ದೂರು ದಾಖಲಾಗಿದ್ದು, ದೂರು ಸ್ವೀಕರಿಸಿರುವ ಮುಖ್ಯ ಮ್ಯಾಜಿಸ್ಟ್ರೇಟ್ ಮೊಹಮ್ಮದ್ ಅಸ್ಲಾಂ ಸಿದ್ಧಿಕಿ ಅವರು ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.