ದೇಶ

ಒಮರ್ ಹೇಳಿಕೆಯಿಂದ ಪಾಕಿಸ್ತಾನಕ್ಕೆ ಉತ್ತೇಜನ: ಬಿಜೆಪಿ

ಒಮರ್ ಅಬ್ದುಲ್ಲಾ ಅವರ ಹೇಳಿಕೆ ಪಾಕಿಸ್ತಾನಕ್ಕೆ ಮತ್ತಷ್ಟು ಉತ್ತೇಜನ ನೀಡಿದಂತಾಗಿದ್ದು, ಪಾಕಿಸ್ತಾನ ತಪ್ಪಿಸಿಕೊಳ್ಳು ಒಮರ್ ಅವದೇ ದಾರಿ ತೋರಿಸುತ್ತಿದ್ದಾರೆಂದು ಬಿಜೆಪಿ...

ಒಮರ್ ಹೇಳಿಕೆಯಿಂದ ಪಾಕಿಸ್ತಾನಕ್ಕೆ ಉತ್ತೇಜನ: ಬಿಜೆಪಿ
ಬಿಜೆಪಿ ವಕ್ತಾರ ಸಂಬಿತ್ ಪಾತ್ರ
Published On :

ನವದೆಹಲಿ: ಒಮರ್ ಅಬ್ದುಲ್ಲಾ ಅವರ ಹೇಳಿಕೆ ಪಾಕಿಸ್ತಾನಕ್ಕೆ ಮತ್ತಷ್ಟು ಉತ್ತೇಜನ ನೀಡಿದಂತಾಗಿದ್ದು, ಪಾಕಿಸ್ತಾನ ತಪ್ಪಿಸಿಕೊಳ್ಳು ಒಮರ್ ಅವದೇ ದಾರಿ ತೋರಿಸುತ್ತಿದ್ದಾರೆಂದು ಬಿಜೆಪಿ ಭಾನುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಂತ್ರಿ ಒಮರ್ ಅಬ್ದುಲ್ಲಾ ಅವರು ಪಾಕಿಸ್ತಾನ ಪರವಾಗಿ ಹೇಳಿಕೆಗಳನ್ನು ನೀಡುತ್ತಿದ್ದು, ಒಮರ್ ಅವರ ಹೇಳಿಕೆ ಉಸಿರುಗಟ್ಟಿದ್ದ ಪಾಕಿಸ್ತಾನಕ್ಕೆ ಆಕ್ಸಿಜನ್ ನೀಡಿದಂತಾಗಿದೆ. ಒಮರ್ ತಮ್ಮ ಹೇಳಿಕೆಯಿಂದ ಪಾಕಿಸ್ತಾನ ತಪ್ಪಿಸಿಕೊಳ್ಳಲು ದಾರಿ ತೋರಿಸುತ್ತಿದ್ದಾರೆಂದು ಹೇಳಿದ್ದಾರೆ.

ರಾಜಕೀಯ ಹೇಳಿಕೆಗಳಿಂದಾಗಿ ನಗ್ರೋಟಾದಲ್ಲಿ ಉಗ್ರರ ದಾಳಿ ನಡೆಯಿತು. ಭಾರತ ಮತ್ತು ಪಾಕಿಸ್ತಾನ ಮಾಡಿದ ತಪ್ಪಿಗೆ ಈ ರೀತಿಯ ಬೆಳವಣಿಗೆಗಳು ನಡೆಯಿತು ಎಂದು ಒಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಈ ರೀತಿಯ ಹೇಳಿಕೆ ನಿಜಕ್ಕೂ ಶೋಚನೀಯವಾದದ್ದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.