2017ರಲ್ಲಿ ಅಮೆರಿಕಾಗೆ ಭೇಟಿ ನೀಡಲಿರುವ ಪಾಕ್ ಪ್ರಧಾನಿ ನವಾಜ್ ಷರೀಫ್
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ 2017 ರಲ್ಲಿ ಅಮೆರಿಕಾಗೆ ಭೇಟಿ ನೀಡುವ ಸಾಧ್ಯತೆ ಇದೆ.

Published On :
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ 2017 ರಲ್ಲಿ ಅಮೆರಿಕಾಗೆ ಭೇಟಿ ನೀಡುವ ಸಾಧ್ಯತೆ ಇದೆ. 2017 ರ ಜ.20 ರಂದು ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು ನವಾಜ್-ಷರೀಫ್ ಡೊನಾಲ್ಡ್ ಟ್ರಂಪ್ ಭೇಟಿ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಕೆಲವು ವರದಿಗಳು ಪ್ರಕಟವಾಗಿದೆ.
ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ರಾಜತಾಂತ್ರಿಕ ಅಧಿಕಾರಿಗಳು ಉಭಯ ನಾಯಕರ ಭೇಟಿಗೆ ವ್ಯವಸ್ಥೆ ಮಾಡಲಿದ್ದು, ಅಮೆರಿಕಾದೊಂದಿಗಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಪಾಕಿಸ್ತಾನ ನಿರ್ಧರಿಸಿದ್ದು, ಡೊನಾಲ್ಡ್ ಟ್ರಂಪ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಅವರೊಂದಿಗೆ ಈ ವಿಷಯಗಳ ಬಗ್ಗೆ ನವಾಜ್ ಷರೀಫ್ ಮಾತನಾಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


