ತಮಿಳುನಾಡು ಸಿಎಂ ಜಯಲಲಿತಾಗೆ ಹೃದಯ ಸ್ತಂಭನ; ಎಂಐಸಿಯುನಲ್ಲಿ ಚಿಕಿತ್ಸೆ
ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.

Published On :
ಚೆನ್ನೈ: ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯ ಸ್ತಂಭನ ಉಂಟಾಗಿದೆ.
ಒಂದೆರಡು ತಿಂಗಳಿಂದ ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜಯಲಲಿತಾ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ ಎಂದು ಅಪೋಲೋ ಆಸ್ಪತ್ರೆಯ ಪ್ರಕಟಣೆ ಮೂಲಕ ತಿಳಿದುಬಂದಿದೆ.
ಆಸ್ಪತ್ರೆ ಸಿಒಒ ವಿಶ್ವನಾಥನ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ತಮಿಳುನಾಡು ಸಿಎಂ ಅವರ ಆರೋಗ್ಯದ ಬಗ್ಗೆ ತಜ್ಞರು ನಿಗಾವಹಿಸಿದ್ದಾರೆ ಎಂದು ಹೇಳಿದ್ದಾರೆ. ಜಯಲಲಿತಾ ಅವರ ಅನಾರೋಗ್ಯದ ಬಗ್ಗೆ ಎಐಎಡಿಎಂಕೆ ಸಹ ಹೇಳಿಕೆ ಬಿಡುಗಡೆ ಮಾಡಿದ್ದು ಮೆಡಿಕಲ್ ತೀವ್ರ ನಿಗಾ ಘಟಕದಲ್ಲಿ (ಎಂಐಸಿಯು)ನಲ್ಲಿ ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


