ದೇಶ

ದಾಳಿ ಮಾಡಿ ಆರೋಪಿ ಪರಾರಿ, ನಾಲ್ವರು ಪೊಲೀಸರಿಗೆ ಗಾಯ

ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸರ ಮೇಲೆ ದಾಳಿ ಮಾಡಿ ಜೈಲಿನಿಂದ ಪರಾರಿಯಾಗಿದ್ದು, ದಾಳಿ ವೇಳೆ ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ...

ದಾಳಿ ಮಾಡಿ ಆರೋಪಿ ಪರಾರಿ, ನಾಲ್ವರು ಪೊಲೀಸರಿಗೆ ಗಾಯ
ಸಂಗ್ರಹ ಚಿತ್ರ
Published On :

ಮುಜಾಫರ್ನಗರ: ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸರ ಮೇಲೆ ದಾಳಿ ಮಾಡಿ ಜೈಲಿನಿಂದ ಪರಾರಿಯಾಗಿದ್ದು, ದಾಳಿ ವೇಳೆ ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ಶಾಮ್ಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಮಾದಕ ವಸ್ತು ಕಳ್ಳಸಾಗಣೆ ಪ್ರಕರಣವೊಂದರಲ್ಲಿ ಅಲೀಮ್ ಎಂಬ ಆರೋಪಿಯನ್ನು ಪೊಲೀಸರು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಿದ್ದರು. ನಿನ್ನೆ ಆತನ ಬೆಂಬಲಿಗರು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನಂತರ ಆರೋಪಿಯನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆಂದು ಪೊಲಿಸ್ ವರಿಷ್ಠಾಧಿಕಾರಿ ಅಜಯ್ಪಾಲ್ ಶರ್ಮಾ ಅವರು ಹೇಳಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ಆದೇಶ್ ಕುಮಾರ್, ಜಿತೇಂದರ್ ಸಿಂಗ್, ಅರವಿಂದ ಸಿಂಗ್ ಹಾಗೂ ಪೇದೆ ಷಕೀಲ್ ಗಾಯಗೊಂಡ ಪೊಲೀಸರಾಗಿದ್ದಾರೆಂದು ಹೇಳಲಾಗುತ್ತಿದೆ. ಪರಾರಿಯಾಗಿರುವ ಆರೋಪಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.