ದೇಶ

ಕೆಎಲ್ ಎಫ್ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮತ್ತೆ ಏಳು ದಿನ ಪೊಲೀಸ್ ವಶಕ್ಕೆ

ಪಂಜಾಬ್ ನ ನಾಭಾ ಜೈಲಿನಿಂದ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದ ಖಲಿಸ್ತಾನ್ ಲಿಬರೇಷನ್ ಫ್ರಂಟ್ ಸಂಘಟನೆಯ ಮುಖ್ಯಸ್ಥ

ಕೆಎಲ್ ಎಫ್ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮತ್ತೆ ಏಳು ದಿನ ಪೊಲೀಸ್ ವಶಕ್ಕೆ
ಹರ್ಮಿಂದರ್ ಸಿಂಗ್
Published On :
ನವದೆಹಲಿ: ಪಂಜಾಬ್ ನ ನಾಭಾ ಜೈಲಿನಿಂದ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದ ಖಲಿಸ್ತಾನ್ ಲಿಬರೇಷನ್ ಫ್ರಂಟ್ ಸಂಘಟನೆಯ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂನನ್ನು ಮತ್ತೆ ಏಳು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.
ಹರ್ಮಿಂದರ್ ಸಿಂಗ್ ಪೊಲೀಸ್ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಂದು ದೆಹಲಿ ಕೋರ್ಟ್ ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಒಂದು ವಾರ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರೀತೆಶ್ ಸಿಂಗ್ ಅವರು, ದೆಹಲಿ ಪೊಲೀಸರ ಮನವಿಯನ್ನು ಪುರಸ್ಕರಿಸಿ ಆರೋಪಿಯನ್ನು ಡಿಸೆಂಬರ್ 12ರವರೆಗೆ ಪೊಲೀಸ್ ವಶಕ್ಕೆ ನೀಡಿದ್ದಾರೆ.
ಕಳೆದ ನವೆಂಬರ್ 28ರಂದು ಕೋರ್ಟ್ ಹರ್ಮಿಂದರ್ ಸಿಂಗ್ ನನ್ನು ಏಳು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿತ್ತು.
ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಂಜಾಬ್ ನಭಾ ಜೈಲಿನ ಮೇಲಿನ ಉಗ್ರ ದಾಳಿ ಹಾಗೂ ಉಗ್ರರ ಪರಾರಿ ಪ್ರಕರಣ ಸಂಬಂಧ ತುರ್ತು ಕಾರ್ಯಾಚರಣೆ ಕೈಗೊಂಡಿದ್ದ ಪಂಜಾಬ್ ಪೊಲೀಸರು ಕೇವಲ 24 ಗಂಟೆಗಳೊಳಗೆ ದೆಹಲಿ  ಪೊಲೀಸರ ನೆರವಿನೊಂದಿಗೆ ಉಗ್ರ ಹರ್ಮಿಂದರ್ ಸಿಂಗ್ ಮಿಂಟೂನನ್ನು ಬಂಧಿಸಿದ್ದಾರೆ.
49 ವರ್ಷ ವಯಸ್ಸಿನ ಹರ್ಮಿಂದರ್ ಸಿಂಗ್ ಮಿಂಟೂ ವಿರುದ್ಧ 10ಕ್ಕೂ ಹೆಚ್ಚು ದುಷ್ಕೃತ್ಯಗಳಲ್ಲಿ ಭಾಗಿಯಾದ ಆರೋಪವಿದ್ದು, 2014ರಲ್ಲಿ ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈತನನ್ನು ಬಂಧಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.