ಮುಂದುವರೆದ ನೋಟು ನಿಷೇಧ ಗದ್ದಲ: ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ
ರು.500 ಹಾಗೂ 1,000 ನೋಟುಗಳ ಮೇಲಿನ ನಿಷೇಧ ಕುರಿತಂತೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಈ ಹಿನ್ನಲೆಯಲ್ಲಿ ಉಭಯ ಸದನಗಳ ಕಲಾಪವನ್ನು...

ನವದೆಹಲಿ: ರು.500 ಹಾಗೂ 1,000 ನೋಟುಗಳ ಮೇಲಿನ ನಿಷೇಧ ಕುರಿತಂತೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಈ ಹಿನ್ನಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ಕಲಾಪ ಆರಂಭವಾಗುತ್ತಿದ್ದೆ ಉಭಯ ಸದನಗಳಲ್ಲಿ ನೋಟು ನಿಷೇಧ ಕುರಿತಂತೆ ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲು ಆರಂಭಿಸಿದ್ದವು. ಅಲ್ಲದೆ, ಕಪ್ಪುಹಣ ಕುರಿತಂತೆ ವಿರೋಧ ಪಕ್ಷಗಳ ವಿರುದ್ಧ ಆರೋಪ ವ್ಯಕ್ತಪಡಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡಲೇ ತಮ್ಮ ಹೇಳಿಕೆಗೆ ಕ್ಷಣೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದವು.
ಕಲಾಪದ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ನೋಟು ನಿಷೇಧ ಕುರಿತಂತೆ ಈ ಹಿಂದೆ ನಾವು ನಿಯಮ 56ರ ಅಡಿಯಲ್ಲಿ ಚರ್ಚೆ ನಡೆಸಬೇಕೆಂದು ಆಗ್ರಹಿಸಿದ್ದೆವು. ಇದರ ಬದಲಾಗಿ ನಿಯಮ 184 ಅಡಿಯಲ್ಲಿ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಇದೀಗ ಸರ್ಕಾರ ಕೂಡ ನಿಯಮ 193 ಬದಲಾಗಿ ನಿಯಮ 184 ಅಡಿಯಲ್ಲಿ ಚರ್ಚೆ ನಡೆಸಲು ಒಪ್ಪಿಗೆ ಸೂಚಿಸಬೇಕಿದೆ ಎಂದು ಹೇಳಿದರು. ಖರ್ಗೆ ಅವರ ಈ ಹೇಳಿಕೆಗೆ ಟಿಎಂಸಿ ನಾಯಕ ಸುದೀಪ್ ಬಂಡೋಪದ್ಯಾಯ್ ಮತ್ತು ಸಿಪಿಐ ನಾಯಕ ಪಿ. ಕರುನಾಕರನ್ ಅವರು ಬೆಂಬಲ ವ್ಯಕ್ತಪಡಿಸಿದರು. ಆದರೆ, ಜನತಾ ದಳ ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ನಾಯಕರು ನಿಯಮ 193 ಅಡಿಯಲ್ಲಿಯೇ ಚರ್ಚೆ ನಡೆಯಬೇಕು ಎಂದು ಪಟ್ಟು ಹಿಡಿದವು.
ರಾಜ್ಯಸಭೆಯಲ್ಲಿಯೂ ಕಾಂಗ್ರೆಸ್, ಬಿಎಸ್'ಪಿ, ಎಸ್ ಪಿ ಮತ್ತು ಟಿಎಂಸಿ ಸದಸ್ಯರು ನೋಟು ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಬೇಕೆಂದು ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ನೋಟು ನಿಷೇಧದಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸ್ಪಷ್ಟನೆ ನೀಡಬೇಕಿದೆ ಎಂದು ಆಗ್ರಹಿಸಿದವು. ಗುಲಾಂ ನಬಿ ಆಜಾದ್ ಅವರು ಮಾತನಾಡಿ, ನೋಟು ನಿಷೇಧದಿಂದಾಗಿ ಉದ್ಯೋಗಸ್ಥ ಜನರು ಹಾಗೂ ಪಿಂಚಣಿದಾರರಿಗೆ ಸರಿಯಾದ ರೀತಿಯಲ್ಲಿ ವೇತನ ಪಡೆಯಲು ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಆರ್ಥಿಕ ತುರ್ತುಪರಿಸ್ಥಿತಿ ಇದೆಯೇ ಎಂಬುದರ ಬಗ್ಗೆಸ ಸರ್ಕಾರ ಸ್ಪಷ್ಟನೆ ನೀಡಬೇಕಿದೆ ಎಂದು ಹೇಳಿದರು.
ಉಪ ಸ್ಪೀಕರ್ ಪಿಜೆ. ಕುರಿಯನ್ ಅವರು ಚರ್ಚೆ ನಡೆಸುವಂತೆ ತಿಳಿಸಿದರೂ, ವಿರೋಧ ಪಕ್ಷಗಳ ನಾಯಕರು ಸದನದ ಬಾವಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಆರಂಭಿಸಿದರು. (ಲೋಗೋನ್ ಕಾ ಪೈಸಾ, ಲೋಗೋನ್ ಕೋ ದೋ) ಜನರ ದುಡ್ಡನ್ನು ಜನರಿಗೆ ನೀಡಿ, ಹೋಶ್ ಮೇ ಆವ್, ಹೋಶ್ ಮೇ ಆವ್, ಪ್ರಧಾನಮಂತ್ರಿ ಹೌಸ್ ಮೇ ಆವ್ (ಪ್ರಧಾನಮಂತ್ರಿಗಳೇ ಎಚ್ಚರಗೊಳ್ಳಿ, ಸದನಕ್ಕೆ ಬನ್ನಿ) ಎಂಬ ಘೋಷಣೆಗಳನ್ನು ಕೂಗಲು ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ತೀವ್ರ ಕಲಾಪಕ್ಕೆ ತೀವ್ರ ಗದ್ದಲವನ್ನುಂಟು ಮಾಡಿದ ಹಿನ್ನಲೆಯಲ್ಲಿ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


