ಮಾತುಕತೆ ಬಿಟ್ಟರೆ ಉಭಯ ರಾಷ್ಟ್ರಗಳ ನಡುವಿನ ಸಮಸ್ಯೆಗೆ ಬೇರೆ ಪರಿಹಾರವಿಲ್ಲ: ಫರೂಖ್ ಅಬ್ದುಲ್ಲಾ
ಉಭಯ ರಾಷ್ಟ್ರಗಳು ಕುಳಿತು ಮಾತನಾಡಿದರೆ ಮಾತ್ರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಮಸ್ಯೆಗಳು ಪರಿಹಾರಗೊಳ್ಳುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ...

ಶ್ರೀನಗರ: ಉಭಯ ರಾಷ್ಟ್ರಗಳು ಕುಳಿತು ಮಾತನಾಡಿದರೆ ಮಾತ್ರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಮಸ್ಯೆಗಳು ಪರಿಹಾರಗೊಳ್ಳುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳ ನಡುವೆ ಉಂಟಾಗಿರುವ ವೈಮನಸ್ಸು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನೆರೆ ರಾಷ್ಟ್ರಗಳು ಕುಳಿತು ಪರಸ್ಪರ ಮಾತುಕತೆಗಳನ್ನು ಆಡಿದಾಗ ಮಾತ್ರ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳ ನಡುವಿನ ದೀರ್ಘಕಾಲಿಕ ಬಿಕ್ಕಟ್ಟು ಬಗೆಹರಿಯಲಿದೆ. ಮಾತುಕತೆ ಬಿಟ್ಟರೆ ಉಭಯ ರಾಷ್ಟ್ರಗಳ ನಡುವಿನ ಸಮಸ್ಯೆಗಳ ಬಗೆಹರಿಕೆಗೆ ಬೇರಾವುದೇ ಪರಿಹಾರವಿಲ್ಲ ಎಂದು ಹೇಳಿದ್ದಾರೆ.
ಒಂದಲ್ಲ ಒಂದು ದಿನ ಎರಡು ರಾಷ್ಟ್ರಗಳು ಕುಳಿತು ಮಾತುಕತೆ ನಡೆಸಲಿದೆ. ಹಾಗೂ ಸಮಸ್ಯೆಗಳು ಬಗೆಹರಿಯಲಿದೆ. ಮಾತುಕತೆ ಬಿಟ್ಟು ಉಭಯ ರಾಷ್ಟ್ರಗಳ ಸಮಸ್ಯೆಗೆ ಬೇರಾವುದೇ ದಾರಿಯಿಲ್ಲ. ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಡುತ್ತಲೇ ಬಂದಿದ್ದು, ನೆರೆರಾಷ್ಟ್ರಗಳು ತಮ್ಮನ್ನು ತಾವು ನಿಯಂತ್ರಿಸಿಕೊಳ್ಳಬೇಕಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತುಕತೆ ನಡೆಸಲಿದ್ದಾರೆಂಬ ನಂಬಿಕೆ ನಮಗಿದ್ದು, ಶೀಘ್ರದಲ್ಲೇ ಉಭಯ ರಾಷ್ಟ್ರಗಳ ಸಮಸ್ಯೆಗಳು ಬಗೆಹರಿಯಲಿದೆ ಎಂಬ ವಿಶ್ವಾಸವಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಸಮಸ್ಯೆಗಳು ಬಗೆಹರಿಯಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಯಸುತ್ತಿದ್ದು, ಒಂದಲ್ಲ ಒಂದು ದಿನ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಿದೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


