ಇಂದು ಸಂಜೆ ಮುಖ್ಯಮಂತ್ರಿ ಜಯಲಲಿತಾ ಅಂತ್ಯಸಂಸ್ಕಾರ, ಏಳು ದಿನಗಳ ಶೋಕಾಚರಣೆ
ಭಾರತ ದೇಶ ಕಂಡ ಅತ್ಯಂತ ಪ್ರಭಾವಶಾಲಿ ಮತ್ತು ಜನಪ್ರಿಯ ರಾಜಕಾರಣಿ...

Published On :
ನವದೆಹಲಿ/ಚೆನ್ನೈ: ಭಾರತ ದೇಶ ಕಂಡ ಅತ್ಯಂತ ಪ್ರಭಾವಶಾಲಿ ಮತ್ತು ಜನಪ್ರಿಯ ರಾಜಕಾರಣಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಂತ್ಯಕ್ರಿಯೆ ಮಂಗಳವಾರ ಸಂಜೆ 4 ಗಂಟೆ ನಂತರ ಚೆನ್ನೈನ ಮರೀನಾ ಬೀಚ್ ನಲ್ಲಿ ನಡೆಯಲಿದೆ.
68 ವರ್ಷದ ಜಯಲಲಿತಾ ನಿನ್ನೆ ರಾತ್ರಿ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಕಳೆಬರವನ್ನು ಪೊಸ್ ಗಾರ್ಡನ್ ಹೋಮ್ ಗೆ ತೆಗೆದುಕೊಂಡು ಹೋಗಲಾಗಿದೆ. ಅಲ್ಲಿಂದ ಇಂದು ಬೆಳಗ್ಗೆ ರಾಜಾಜಿ ಹಾಲ್ ಗೆ ಕೊಂಡೊಯ್ಯಲಾಯಿತು.
ರಾಷ್ಟ್ರಧ್ವಜದಿಂದ ಸುತ್ತಿ ದೇಹವನ್ನು ರಾಜಾಜಿ ಹಾಲ್ ಗೆ ಕೊಂಡೊಯ್ಯಲಾಗಿದ್ದು ಅಲ್ಲಿ ಇದೀಗ ಸಾವಿರಾರು ಅವರ ಅಭಿಮಾನಿಗಳು ಅಂತಿಮ ದರ್ಶನಕ್ಕಾಗಿ ಸಾಗುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಚೆನ್ನೈಗೆ ಭೇಟಿ ನೀಡಲಿದ್ದಾರೆ.
ತಮ್ಮ ನೆಚ್ಚಿನ ನಾಯಕಿಯನ್ನು ಕಳೆದುಕೊಂಡ ದುಃಖದಲ್ಲಿ ತಮಿಳುನಾಡಿನ ಸಹಸ್ರಾರು ಜನರು ಅಮ್ಮಾ, ಅಮ್ಮಾ ಎಂದು ಕೂಗುತ್ತಾ ಅವರ ನಿವಾಸದ ಹೊರಗೆ ಅಳುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಜಯಲಲಿತಾ ಅವರ ನಿವಾಸದ ಎದುರು ಬ್ಯಾರಿಕೇಡ್ ಗಳನ್ನು ಮುರಿದು ಬೆಂಬಲಿಗರು ಒಳನುಗ್ಗಲು ಪ್ರಯತ್ನಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ದಂಡ ಪ್ರಯೋಗಿಸಬೇಕಾಗಿ ಬಂತು.
ಏಳು ದಿನಗಳ ಶೋಕಾಚರಣೆ: ಮುಖ್ಯಮಂತ್ರಿ ಜಯಲಲಿತಾ ಅವರ ನಿಧನಕ್ಕೆ ತಮಿಳುನಾಡಿನಲ್ಲಿ ಇಂದಿನಿಂದ ಏಳು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳನ್ನು ಮೂರು ದಿನಗಳವರೆಗೆ ರಜೆ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


