ಜಯಲಲಿತಾ ಅದಮ್ಯ ಧೈರ್ಯದಿಂದ ಜೀವನ ನಡೆಸಿದ್ದರು: ಸೋನಿಯಾ ಗಾಂಧಿ
ತಮಿಳುನಾಡು ಸಿಎಂ ಜಯಲಲಿತಾ ಅವರ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದು, ಜೀವನದ ಕೊನೆಯ ವರೆಗೂ ಅದಮ್ಯ ಧೈರ್ಯದಿಂದಲೇ ಹೋರಾಟ ನಡೆಸಿಕೊಂಡು ಬಂದಿದ್ದರು ಎಂದು ಬಣ್ಣಿಸಿದ್ದಾರೆ.

Published On :
ನವದೆಹಲಿ: ತಮಿಳುನಾಡು ಸಿಎಂ ಜಯಲಲಿತಾ ಅವರ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದು, ಜೀವನದ ಕೊನೆಯ ವರೆಗೂ ಅದಮ್ಯ ಧೈರ್ಯದಿಂದಲೇ ಹೋರಾಟ ನಡೆಸಿಕೊಂಡು ಬಂದಿದ್ದರು ಎಂದು ಬಣ್ಣಿಸಿದ್ದಾರೆ.
"ಅನಾರೋಗ್ಯದೊಂದಿಗೆ ಹೋರಾಡಿದಂತೆಯೇ ಜಯಲಲಿತಾ ತಮ್ಮ ಜೀವನದ ಹಲವು ಮಜಲುಗಳಲ್ಲಿ ಎದುರಾದ ಸಂಕಷ್ಟಗಳನ್ನೂ ಧೈರ್ಯವಾಗಿ ಎದುರಿಸಿದ್ದರು, ಜಯಲಲಿತಾ ಅವರ ನಿಧನದ ವಾರ್ತೆ ದುಃಖ ಉಂಟು ಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ನಾಲ್ಕು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಜಯಲಲಿತಾ ಅಲ್ಲಿನ ಜನರ ಸಮಸ್ಯೆಗಳನ್ನು ಅರಿತು, ಜನರ ನಿರೀಕ್ಷೆಗಳನ್ನು ಈಡೇರಿಸಿದ್ದರು, ಜಯಲಲಿತಾ ನಿಜವಾಗಿಯೂ ಓರ್ವ ಅತ್ಯುತ್ತಮ ಆಡಳಿತಗಾರರಾಗಿದ್ದರು, ಕಾಂಗ್ರೆಸ್ ಪಕ್ಷ ಹಾಗೂ ತಮಗೆ ಜಯಲಲಿತಾ ಅವರ ನಿಧನದ ವಾರ್ತೆ ತೀವ್ರ ದುಃಖ ಉಂಟುಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


