ದೇಶ

ಜಯಲಲಿತಾ ಅಂತ್ಯಕ್ರಿಯೆಗೆ ಮಮತಾ ಬ್ಯಾನರ್ಜಿ ಗೈರು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೋಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಜಯಲಲಿತಾ ಅಂತ್ಯಕ್ರಿಯೆಗೆ ಮಮತಾ ಬ್ಯಾನರ್ಜಿ ಗೈರು
ಮಮತಾ ಬ್ಯಾನರ್ಜಿ
Published On :

ಕೊಲ್ಕೋತಾ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೋಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಜಯಲಲಿತಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಬಯಸಿದ್ದೆ. ಅಂತ್ಯ ಸಂಸ್ಕಾರದ ಸಮಯದ ವಿವರ ಈಗ ಸಿಕ್ಕಿದ್ದು, ವಿಮಾನಗಳು ಸಿಗುತ್ತಿಲ್ಲವಾದ ಕಾರಣ ಹಾಜರಾಗಲು ಸಾಧ್ಯವಾಗುತ್ತಿಲ್ಲ.

ನನ್ನ ಪರವಾಗಿ ತೃಣಮೂಲ ಕಾಂಗ್ರೆಸ್ ಸಂಸದರುಗಳಾದ ಡೆರೆಕ್ ಓ ಬ್ರೈನ್ ಮತ್ತು ಕಲ್ಯಾಣ್ ಬ್ಯಾನರ್ಜಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೋಳ್ಳುತ್ತಾರೆ ಎಂದು ಮಮತಾ ಬ್ಯಾನರ್ಜಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನಾರೋಗ್ಯದಿಂದಾಗಿ ಕಳೆದ 75 ದಿನಗಳಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.