ರಾಜ್ಯಸಭೆಯಲ್ಲಿ ಮುಂದುವರೆದ ಗದ್ದಲ: ಕೇಂದ್ರದ ಮೌನ ಪ್ರಶ್ನಿಸಿ ಪ್ರತಿಪಕ್ಷಗಳು ವಾಗ್ದಾಳಿ
ರಾಜ್ಯಸಭೆಯಲ್ಲಿ ಕಲಾಪ ಆರಂಭವಾದಾಗಿನಿಂದಲು ನೋಟು ನಿಷೇಧ ಕುರಿತಂತೆ ಕೇಂದ್ರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿಕೊಂಡು ಬರುತ್ತದಲೇ ಇರುವ ವಿರೋಧ ಪಕ್ಷಗಳು ಇಂದೂ ಕೂಡ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದು, ಮೌನ ಪ್ರಶ್ನಿಸಿ ಕೇಂದ್ರ ವಿರುದ್ದ ವಿರೋಧ ಪಕ್ಷಗಳು...

ನವದೆಹಲಿ; ರಾಜ್ಯಸಭೆಯಲ್ಲಿ ಕಲಾಪ ಆರಂಭವಾದಾಗಿನಿಂದಲು ನೋಟು ನಿಷೇಧ ಕುರಿತಂತೆ ಕೇಂದ್ರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿಕೊಂಡು ಬರುತ್ತದಲೇ ಇರುವ ವಿರೋಧ ಪಕ್ಷಗಳು ಇಂದೂ ಕೂಡ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದು, ಮೌನ ಪ್ರಶ್ನಿಸಿ ಕೇಂದ್ರ ವಿರುದ್ದ ವಿರೋಧ ಪಕ್ಷಗಳು ವಾಗ್ದಾಳಿ ನಡೆಸುತ್ತಿವೆ.
ಕಲಾಪದ ವೇಳೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರು, ನೋಟಿನ ಮೇಲೆ ಹೇರಿ 1 ತಿಂಗಳು ಕಳೆದಿದೆ. ಈ ವರೆಗೂ 84 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ತಯಾರಿಯಿಲ್ಲದೆಯೇ ಕೇಂದ್ರ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಸಾಮಾನ್ಯ ಜನರ ಸಾವಿಗೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಈ ವೇಳೆ ಮೌನ ಮುರಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಕಲಾಪದಲ್ಲಿ ಚರ್ಚೆ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳು ಮಧ್ಯೆ ಪ್ರವೇಶಿಸಿ ಪ್ರತಿಭಟನೆ ನಡೆಸಲು ಆರಂಭಿಸುತ್ತವೆ. ಪ್ರಚಾರಕ್ಕಾಗಿ ಕಾಂಗ್ರೆಸ್ ಹಾಗೂ ಇನ್ನಿತರೆ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗಮ ಕಲಾಪ ನಡೆಯಲು ಅನುವು ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದರು.
ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸದನಕ್ಕೆ ಹಾಜರಬೇಕೆಂದು ಆಗ್ರಹಿಸಿದ್ದವು. ಪ್ರಧಾನಮಂತ್ರಿಗಳೂ ಕೂಡ ಸದನಕ್ಕೆ ಹಾಜರಾಗಿದ್ದಾರೆ. ಆದರೂ, ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಚಾರಕ್ಕಾಗಿಯೇ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ ಎಂಬುದು ಇದರಿಂದ ತಿಳಿದುಬರುತ್ತಿದೆ ಎಂದು ಹೇಳಿದ್ದಾರೆ.
ಜೇಟ್ಲಿ ಅವರ ಈ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್ 'ಪಿ ಮುಖ್ಯಸ್ಥೆ ಮಾಯಾವತಿ ಅವರು, ನೋಟು ನಿಷೇಧದ ವಿರುದ್ಧ ನಾವು ಪ್ರತಿಭಟಿಸುತ್ತಿಲ್ಲ. ಆದರೆ, ನಿಷೇಧ ಹೇರಿರುವ ರೀತಿಯ ವಿರುದ್ಧ ಪ್ರತಿಭಟಿಸುತ್ತಿದ್ದೇವೆ. ಸರ್ಕಾರ ಮೊದಲು ನಮ್ಮ ಬಳಿ ಮಾತನಾಡಿ, ನಮ್ಮ ಮಾತನ್ನು ಕೇಳಬೇಕಿತ್ತು. ನೋಟು ನಿಷೇಧದಿಂದ ಶೇ.90 ಜನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತರಿಸಬೇಕಿದೆ ಎಂದು ಹೇಳಿದರು.
ಮಾಯಾವತಿಯವರು ಮಾತನಾಡುತ್ತಿದ್ದಂತೆಯೇ ಮತ್ತೆ ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಪಸಭಾಪತಿ ಪಿಜೆ. ಕುರಿಯನ್ ಅವರು ಮಧ್ಯೆ ಪ್ರವೇಶ ಮಾಡಿದರೂ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ನಡೆಸುವುದನ್ನು ನಿಲ್ಲಿಸಲಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ಚರ್ಚೆ ನಡೆಸಲಿ ಎಂದು ಘೋಷಣೆಗಳನ್ನು ಕೂಗಲು ಆರಂಭಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


