ದೇಶ

ಉತ್ತರ ಭಾರತದಲ್ಲಿ ದಟ್ಟ ಮಂಜು: ತಡವಾಗಿ ಹೊರಟ 64 ರೈಲುಗಳು, 12 ರದ್ದು

ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಬುಧವಾರ ಕೂಡ ದಟ್ಟ ಮಂಜಿನಿಂದ ಕೂಡಿದ ವಾತಾವರಣವಿರುವುದರಿಂದ...

ಉತ್ತರ ಭಾರತದಲ್ಲಿ ದಟ್ಟ ಮಂಜು: ತಡವಾಗಿ ಹೊರಟ 64 ರೈಲುಗಳು, 12 ರದ್ದು
ದೆಹಲಿಯಲ್ಲಿ ಇಂದು ಬೆಳಗ್ಗೆ ಕಂಡುಬಂದ ದೃಶ್ಯ
Published On :
ನವದೆಹಲಿ: ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಬುಧವಾರ ಕೂಡ ದಟ್ಟ ಮಂಜಿನಿಂದ ಕೂಡಿದ ವಾತಾವರಣವಿರುವುದರಿಂದ ರಾಜಧಾನಿ ಮತ್ತು ಶತಾಬ್ದಿ ಸೇರಿದಂತೆ ಉತ್ತರ ಭಾರತದಿಂದ ಹೊರಡುವ 54 ರೈಲುಗಳು ನಿಗದಿತ ಅವಧಿಗಿಂತ ತಡವಾಗಿ ಹೊರಟಿದ್ದು 12 ರೈಲುಗಳು ಸಂಚಾರ ರದ್ದುಪಡಿಸಿವೆ.
ಈ ಮಧ್ಯೆ ದೆಹಲಿ ವಿಮಾನ ನಿಲ್ದಾಣದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರಕ್ಕೆ ವ್ಯತ್ಯಯವುಂಟಾಗದಂತೆ ಮಂಜಿನ ಪರಿಸ್ಥಿತಿಯನ್ನು ತಾಂತ್ರಿಕವಾಗಿ ಎದುರಿಸಲು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಯಾರಿ ನಡೆಸಿದೆ.
ಅಧಿಕಾರಿಗಳು 18 ರವ್ ವೇ ವಿಷುವಲ್ ರೇಂಜ್ ಸಾಧನಗಳನ್ನು ಸ್ಥಾಪಿಸಿದ್ದಾರೆ. ಇದರಿಂದ ವಿಮಾನ ಹಾರಾಟ ನಡೆಸುವಾಗ ಯಾವ ದಿಕ್ಕಿನಲ್ಲಿ ದಟ್ಟವಾದ ಮಂಜು ಕವಿದಿದೆ ಮತ್ತು ಏನು ಕ್ರಮ ಕೈಗೊಳ್ಳಬೇಕೆಂಬುದು ಗೊತ್ತಾಗುತ್ತದೆ.
ದಟ್ಟ ಮಂಜು ಮುಸುಕಿದ ವಾತಾವರಣದಿಂದಾಗಿ 30 ರೈಲುಗಳ ವೇಳಾಪಟ್ಟಿ ಬದಲಾಗಿದೆ, 4 ರೈಲುಗಳ ಸಂಚಾರ ಬದಲಾಯಿಸಲಾಗಿದೆ.
ಎಎನ್ಐ ಸುದ್ದಿಸಂಸ್ಥೆ ಮಾಡಿರುವ ವರದಿಯಲ್ಲಿ ದೆಹಲಿಯಿಂದ ಹೊರಡುವ 81 ರೈಲುಗಳು ತಡವಾಗಿ ಹೊರಡಲಿದ್ದು 21 ರೈಲುಗಳ ವೇಳಾಪಟ್ಟಿ ಬದಲಾಗಿದೆ ಮತ್ತು 3 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.