ನೋಟ್ ನಿಷೇಧ: ದೇಶಾದ್ಯಂತ 50 ಬ್ಯಾಂಕ್ ಶಾಖೆಗಳಲ್ಲಿ ದಾಖಲೆ ಪರಿಶೀಲಿಸಿದ ಇಡಿ
ಕೇಂದ್ರ ಸರ್ಕಾರ ದೊಡ್ಡ ಮೌಲ್ಯದ ನೋಟ್ ಗಳನ್ನು ನಿಷೇಧಿಸಿದ ನಂತರ ಕೆಲವರು ಕಪ್ಪು ಹಣವನ್ನು ಬಿಳಿ ಮಾಡಲು ಬ್ಯಾಂಕ್ ಅಧಿಕಾರಿಗಳು...

Published On :
ನವದೆಹಲಿ: ಕೇಂದ್ರ ಸರ್ಕಾರ ದೊಡ್ಡ ಮೌಲ್ಯದ ನೋಟ್ ಗಳನ್ನು ನಿಷೇಧಿಸಿದ ನಂತರ ಕೆಲವರು ಕಪ್ಪು ಹಣವನ್ನು ಬಿಳಿ ಮಾಡಲು ಬ್ಯಾಂಕ್ ಅಧಿಕಾರಿಗಳು ಸಹಕರಿಸುತ್ತಿರುವುದು ಇತ್ತೀಚಿಗೆ ಬಹಿರಂಗವಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬುಧವಾರ ದೇಶಾದ್ಯಂತ ಸುಮಾರು 50ಕ್ಕೂ ಹೆಚ್ಚು ಬ್ಯಾಂಕ್ ಶಾಖೆಗಳ ಮೇಲೆ ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ಹಾಗೂ ಹವಾಲ ಹಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
500 ಹಾಗೂ 1000 ರುಪಾಯಿ ನೋಟ್ ನಿಷೇಧ ಮಾಡಿದ ನಂತರ ಕಪ್ಪು ಹಣವನ್ನು ಕಾನೂನು ಬಾಹಿರವಾಗಿ ವಿನಿಮಯ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಹಲವು ಬ್ಯಾಂಕ್ ಶಾಖೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತೀಚಿಗಷ್ಟೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಬ್ಬರು ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಿತ್ತು. ಅಲ್ಲದೆ ನವೆಂಬರ್ 30ರಂದು ದೇಶಾದ್ಯಂತ 40 ಸ್ಥಳಗಳಲ್ಲಿ ದಾಳಿ ನಡೆಸಿ, ಕಪ್ಪು ಹಣ ಹೊಂದಿರುವುದನ್ನು ಪತ್ತೆ ಹಚ್ಚಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


