ದೇಶ

ಲೋಕಸಭೆಯಲ್ಲಿ ಮುಂದುವರೆದ ಗದ್ದಲ: ಕೇಂದ್ರದ ವಿರುದ್ಧ ಅಡ್ವಾಣಿ ಅಸಮಾಧಾನ

ಸಂಸತ್ತಿನಲ್ಲಿ ಅಧಿವೇಶನ ಆರಂಭವಾದಾಗಿನಿಂದಲೂ ಸುಗಮವಾಗಿ ಕಲಾಪ ಸಾಗದಿರುವುದಕ್ಕೆ ತೀವ್ರ ಬೇಸರವನ್ನು ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿಯವರು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ...

ಲೋಕಸಭೆಯಲ್ಲಿ ಮುಂದುವರೆದ ಗದ್ದಲ: ಕೇಂದ್ರದ ವಿರುದ್ಧ ಅಡ್ವಾಣಿ ಅಸಮಾಧಾನ
ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ
Published On :

ನವದೆಹಲಿ: ಸಂಸತ್ತಿನಲ್ಲಿ ಅಧಿವೇಶನ ಆರಂಭವಾದಾಗಿನಿಂದಲೂ ಸುಗಮವಾಗಿ ಕಲಾಪ ಸಾಗದಿರುವುದಕ್ಕೆ ತೀವ್ರ ಬೇಸರವನ್ನು ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ವಿರುದ್ಧ ಗುಡುಗಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರನ್ನುದ್ದೇಶಿಸಿ ಮಾತನಾಡಿರುವ ಅವರು, ಸಂಸತ್ತಿನಲ್ಲಿ ಸುಗಮವಾಗಿ ಕಲಾಪ ಸುಗಮವಾಗಿ ಸಾಗದಿರುವುದಕ್ಕೆ ಸರ್ಕಾರ ಹಾಗೂ ವಿರೋಧ ಪಕ್ಷಗಳು ನೇರಹೊಣೆಯಾಗಿವೆ. ಸುಗಮ ಕಲಾಪ ನಡೆಸಲು ಅಡ್ಡಿಯಾದವರ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಅಲ್ಲದೆ, ಇದೇ ವೇಳೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ವಿರುದ್ಧ ಗುಡುಗಿರುವ ಅವರು, ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿರುವುದಾಗಿ ಮಾಹಿತಿ ತಿಳಿದುಬಂದಿದೆ. ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಸರಿಯಾಗಿ ನಡೆಸಿಕೊಡುತ್ತಿಲ್ಲ. ಈ ಮಾತನ್ನು ನಾನು ಸಾರ್ವಜನಿಕವಾಗಿ ಹೇಳುತ್ತೇನೆ. ಕಲಾಪ ನಾಶವಾಗುತ್ತಿರುವುದಕ್ಕೆ ಸರ್ಕಾರ ಹಾಗೂ ವಿರೋಧಪಕ್ಷಗಳು ನೇರ ಹೊಣೆಯಾಗಿವೆ. ಕಲಾಪವನ್ನು ನಡೆಸಲು ನಿಮ್ಮಿಂದ ಸಾಧ್ಯವಾಗದಿದ್ದರೆ, ಕಲಾಪವನ್ನೇಕೆ ಮುಂದೂಡುತ್ತೀರಿ. ಅನಿರ್ದಿಷ್ಟಾವಧಿಗೆ ಏಕೆ ಮುಂದೂಡಬಾರದು ಎಂದು ಕೇಳಿದ್ದಾರೆ.

ಸುಗಮ ಕಲಾಪಕ್ಕೆ ಅಡ್ಡಿಯಾದವರ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಬೇಕಿದ್ದು, ಹಠಮಾರಿತನದ ವರ್ತನೆ ತೋರುತ್ತಿರುವ ನಾಯಕರ ವೇತನವನ್ನು ಕಡಿತಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.