ಶೇ.90 ರಷ್ಟು ಭಾರತೀಯರನ್ನು ಮೋದಿ ಭಿಕ್ಷುಕರನ್ನಾಗಿಸಿದ್ದಾರೆ: ಮಾಯಾವತಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೋಟು ನಿಷೇಧ ಯೋಜನೆ ಶೇ. 90ರಷ್ಟು ಭಾರತೀಯರನ್ನು ಭಿಕ್ಷುಕರನ್ನಾಗಿಸಿದೆ ಎಂದು ಬಹಜನ ...

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೋಟು ನಿಷೇಧ ಯೋಜನೆ ಶೇ. 90ರಷ್ಟು ಭಾರತೀಯರನ್ನು ಭಿಕ್ಷುಕರನ್ನಾಗಿಸಿದೆ ಎಂದು ಬಹಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 60ನೇ ಪರಿನಿರ್ವಾಣ ದಿನದ ಅಂಗವಾಗಿ ಏರ್ಪಡಿಸಿದ್ದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಮಾಯಾವತಿ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು, ಇದೇ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರ್ಕಾರವನ್ನು ಟೀಕಿಸಿದ ಅವರು, ಅಖಿಲೇಶ್ ರಾಜಕೀಯವಾಗಿ ಇನ್ನೂ ಪ್ರಬುದ್ಧವಾಗಿಲ್ಲ, ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಖಿಲೇಶ್ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
ಆಸ್ಪತ್ರೆಗೆ ಪಾವತಿಸಲು ಹಣವಿಲ್ಲದೇ ಜನ ಸಾಮಾನ್ಯರು ಸಾಯುತ್ತಿದ್ದಾರೆ, ವಿದ್ಯಾರ್ಥಿಗಳಿಗೆ ಫೀಸ್ ಕಟ್ಟಲು ಆಗುತ್ತಿಲ್ಲ, ಬಡಜನ ಮಕ್ಕಳ ಮದುವೆಯನ್ನು ಮುಂದೂಡುತ್ತಿದ್ದಾರೆ. ರೈತರು ಬೀಜ ಖರೀದಿಸಲು ಹಣವಿಲ್ಲದೇ ಪರದಾಡುತ್ತಿದ್ದಾರೆ, ಬಂಡವಾಳಶಾಹಿಗಳು ಹಾಗೂ ಮೋದಿ ಸ್ನೇಹಿತರನ್ನು ಹೊರತು ಪಡಿಸಿದರೇ ಉಳಿದ ದೇಶದ ಜನತೆ ಹಣಕ್ಕಾಗಿ ಬವಣೆ ಪಡುತ್ತಿದ್ದಾರೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
ನೋಟುಗಳನ್ನು ನಿಷೇಧಿಸುವ 10 ತಿಂಗಳ ಮುಂಚೆಯೇ ತಮ್ಮ ಸ್ನೇಹಿತರಕಿಗೆ ಹಾಗೂ ಬಂಡವಾಳಷಾಹಿಗಳಿಗೆ ಮೋದಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ದೂರಿದ್ದಾರೆ,
ಮುಂದಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ನೀಡಿ ಗೆಲ್ಲಿಸಿದರೇ ಅಖಿಲೇಶ್ ಸರ್ಕಾರದಲ್ಲಿ ನಡೆದಿರುವ ಎಲ್ಲಾ ಹಣಕಾಸು ಹಗರಣಗಳ ವಿರುದ್ದ ತನಿಖೆ ನಡೆಸುವುದಾಗಿ ಮಾಯಾವತಿ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


