ಕಣಿವೆ ರಾಜ್ಯದಲ್ಲಿ ಮತ್ತೆ ಉಗ್ರರ ಹಾವಳಿ; ಅರ್ವಾನಿ ಸೆಕ್ಟರ್ ಮೇಲೆ ಗುಂಡಿನ ದಾಳಿ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿದ್ದು, ಅನಂತನಾಗ್ ಜಿಲ್ಲೆಯ ಅರ್ವಾನಿ ಸೆಕ್ಚರ್ ಮೇಲೆ ದಾಳಿ ಮಾಡಿರುವ ಶಸ್ತ್ರಸಜ್ಜಿತ ಉಗ್ರರು ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿದ್ದು, ಅನಂತನಾಗ್ ಜಿಲ್ಲೆಯ ಅರ್ವಾನಿ ಸೆಕ್ಚರ್ ಮೇಲೆ ದಾಳಿ ಮಾಡಿರುವ ಶಸ್ತ್ರಸಜ್ಜಿತ ಉಗ್ರರು ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇದೀಗ ತೀವ್ರ ಚಳಿ ಇದ್ದು, ರಸ್ತೆ ಕಾಣದಷ್ಟು ದಟ್ಟ ಮಂಜು ಆವರಿಸುತ್ತಿದೆ. ಇದನ್ನೇ ತಮ್ಮ ಕುಕೃತ್ಯಕ್ಕೆ ಬಳಕೆ ಮಾಡುತ್ತಿರುವ ಪಾಕಿಸ್ತಾನ ಮೂಲದ ಉಗ್ರರು ಗಡಿ ಬೇಲಿ ದಾಟಿ ಭಾರತದೊಳಗೆ ನುಸುಳಿ ಭಾರತೀಯ ಸೇನೆಯ ಮೇಲೆ ದಾಳಿ ನಡೆಸುತ್ತಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಅರ್ವಾನಿ ಸೆಕ್ಚರ್ ಮೇಲೆ ದಾಳಿ ನಡೆಸುತ್ತಿರುವ ಶಸ್ತ್ರಸಜ್ಜಿತ ಉಗ್ರರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಸತತ ಗುಂಡಿನ ದಾಳಿ ನಡೆಸುತ್ತಿದ್ದಾರೆ.
ಅರ್ವಾನಿ ಸೆಕ್ಟರ್ ನಲ್ಲಿನ ಮನೆಗಳಲ್ಲಿ ಅಡಗಿ ಕುಳಿತು ಉಗ್ರರು ದಾಳಿ ನಡೆಸುತ್ತಿದ್ದು, ಉಗ್ರರ ವಿರುದ್ಧ ಯೋಧರು ಗುಂಡಿನ ಮೂಲಕವೇ ಉತ್ತರ ನೀಡುತ್ತಿದ್ದಾರೆ. ಅಂತೆಯೇ ಘಟನಾ ಸ್ಥಳದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅವಿತಿರುವ ಉಗ್ರರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


