ದೇಶ

ಬಿಜೆಪಿ, ಕಾಂಗ್ರೆಸ್ ಪಕ್ಷಗಳ ನೋಂದಣಿ ರದ್ದತಿಗೆ ಮಾಜಿ ಅಧಿಕಾರಿಯ ಆಗ್ರಹ

ರಾಷ್ಟ್ರೀಯ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಜಿ ಅಧಿಕಾರಿ ಇಎಎಸ್ ಶರ್ಮಾ ವಿದೇಶೀ ದೇಣಿಗೆ ಕಾಯ್ದೆ(ಎಫ್ ಸಿ ಆರ್ ಎ)ಯನ್ನು ಉಲ್ಲಂಘನೆ ಮಾಡಿರುವ ಆರೋಪ ಹೊರಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಪಕ್ಷಗಳ ನೋಂದಣಿ ರದ್ದತಿಗೆ ಮಾಜಿ ಅಧಿಕಾರಿಯ ಆಗ್ರಹ
ಬಿಜೆಪಿ, ಕಾಂಗ್ರೆಸ್ ನೋಂದಣಿ ರದ್ದತಿಗೆ ಮಾಜಿ ಅಧಿಕಾರಿಯ ಆಗ್ರಹ
Published On :
ವಿಶಾಖಪಟ್ಟಣ: ರಾಷ್ಟ್ರೀಯ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಮಾಜಿ ಅಧಿಕಾರಿ ಇಎಎಸ್ ಶರ್ಮಾ ವಿದೇಶೀ ದೇಣಿಗೆ ಕಾಯ್ದೆ(ಎಫ್ ಸಿ ಆರ್ ಎ)ಯನ್ನು ಉಲ್ಲಂಘನೆ ಮಾಡಿರುವ ಆರೋಪ ಹೊರಿಸಿದ್ದು, ಪಕ್ಷಗಳ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. 
ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಶರ್ಮಾ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಎಫ್ ಸಿ ಆರ್ ಎ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದು ತಕ್ಷಣವೇ ಕ್ರಮ ಕೈಗೊಳ್ಳಬೇಕು ಇಲ್ಲದೇ ಇದ್ದಲ್ಲಿ ನ್ಯಾಯಾಂಗದ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ. 
ವಿದೇಶಿ ಮೂಲಗಳಿಂದ ದೇಣಿಗೆ ಸ್ವೀಕರಿಸುವ ವಿಷಯದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯ 29 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.