ವೃದ್ಧಾಪ್ಯ ವೇತನ ಪಡೆಯಲು ಕ್ಯೂ ನಲ್ಲಿ ನಿಂತಿದ್ದ ಹಿರಿಯ ನಾಗರಿಕ ಸಾವು
ವೃದ್ಧಾಪ್ಯ ವೇತನ ಪಡೆಯಲು ಬ್ಯಾಂಕ್ ನಲ್ಲಿ ಕ್ಯೂ ನಿಂತಿದ್ದ 70 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಮಣಿಪುರದ ಇಂಫಾಲದಲ್ಲಿ ನಡೆದಿದೆ.

Published On :
ಇಂಫಾಲ: ವೃದ್ಧಾಪ್ಯ ವೇತನ ಪಡೆಯಲು ಬ್ಯಾಂಕ್ ನಲ್ಲಿ ಕ್ಯೂ ನಿಂತಿದ್ದ 70 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಮಣಿಪುರದ ಇಂಫಾಲದಲ್ಲಿ ನಡೆದಿದೆ.
ಇಬೊಹನಬಿ ಅಕೋಯಿಜಮ್ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಕುಸಿದುಬಿದ್ದ ತಕ್ಷಣ ಬ್ಯಾಂಕ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಆತನನ್ನು ಹತ್ತಿರದಲ್ಲೇ ಇದ್ದ ರೀಜನಲ್ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬ್ಯಾಂಕ್ ಖಾತೆ ಹೊಂದಿರುವವರಿಗೆ ಇಂಫಾಲದ ಬ್ಯಾಂಕ್ ಗಳು ಟೋಕನ್ ನೀಡುತ್ತಿದ್ದವು. ಟೋಕನ್ ಪಡೆದವರಿಗೆ ಮಾತ್ರ ಹಣ ಪಡೆಯಲು ಬ್ಯಾಂಕ್ ಒಳಗೆ ಪ್ರವೇಶ ನೀಡಲಾಗುತ್ತಿದೆ. ಬ್ಯಾಂಕ್ ನಲ್ಲಿ ಹಣ ಪಡೆಯಲು ವೃದ್ಧರು ಸಮಸ್ಯೆ ಎದುರಿಸುತ್ತಿದ್ದು ಬ್ಯಾಂಕ್ ಗಳಲ್ಲಿ ಕನಿಷ್ಠ ಕುಡಿಯುವ ನೀರಿನ ಸೌಲಭ್ಯವನ್ನೂ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


