ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ, ಮುಂದುವರೆದ ಕೂಂಬಿಂಗ್ ಕಾರ್ಯಾಚರಣೆ
ಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿದ್ದು, ಅನಂತನಾಗ್ ಜಿಲ್ಲೆಯ ಅರ್ವಾನಿ ಸೆಕ್ಚರ್...

Published On :
ಅನಂತನಾಗ್: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿದ್ದು, ಅನಂತನಾಗ್ ಜಿಲ್ಲೆಯ ಅರ್ವಾನಿ ಸೆಕ್ಚರ್ ಮೇಲೆ ದಾಳಿ ಮಾಡಿದ ಲಷ್ಕರ್ ಎ ತೊಯಿಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ.
ಅನಂತ್ ನಾಗ್ ಜಿಲ್ಲೆಯ ಅರ್ವಾನಿ ಸೆಕ್ಚರ್ ಮೇಲೆ ದಾಳಿ ನಡೆಸುತ್ತಿರುವ ಶಸ್ತ್ರಸಜ್ಜಿತ ಉಗ್ರರು ಮತ್ತು ಭಾರತೀಯ ಯೋಧರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ.
ಇನ್ನು ನಾಲ್ಕರಿಂದ ಐದು ಉಗ್ರರು ಮನೆಗಳಲ್ಲಿ ಅಡಗಿ ಕುಳಿತಿರುವ ಸಾಧ್ಯತೆ ಇದ್ದು, ಅವಿತಿರುವ ಉಗ್ರರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಲಷ್ಕರ್ ಎ ತೊಯಿಬಾ ಉಗ್ರ ಸಂಘಟನೆಯ ಕಮಾಂಡರ್ ಅಬು ದುಜನ್ ಸೇರಿದಂತೆ ಇನ್ನೂ ನಾಲ್ವರು ಉಗ್ರರು ಮನೆಯೊಂದರಲ್ಲಿ ಅಡಗಿ ಕುಳಿತಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


