ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಅಡಗಿ ಕುಳಿತು ದಾಳಿ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿರುವುದಾಗಿ...

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಅಡಗಿ ಕುಳಿತು ದಾಳಿ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನೆ ನಿನ್ನೆ ಬೆಳಿಗ್ಗೆಯಿಂದಲೇ ಕಾರ್ಯಾಚರಣೆಗಿಳಿದಿತ್ತು. ಕಳೆದ ರಾತ್ರಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಇದರಂತೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನೆ ಉಗ್ರರು ಅಡಗಿ ಕುಳಿತಿರುವ ಪ್ರದೇಶದ ಸುತ್ತಲೂ ಸುತ್ತುವರೆದು ಎನ್ ಕೌಂಟರ್ ನಡೆಸಲು ಮುಂದಾಗಿದ್ದರು. ಇದರಂತೆ ಇಂದು ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


