ಪಾಕಿಸ್ತಾನ ಭಾರತದೊಂದಿಗೆ ಹಗೆತನ ಬಯಲುಸುವುದಿಲ್ಲ: ಅಬ್ದುಲ್ ಬಸಿತ್
ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಉಭಯ ರಾಷ್ಟ್ರಗಳೂ ಮುಂದಾಗಬೇಕು ಎಂದು ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಕರೆ ನೀಡಿದ್ದಾರೆ.

Published On :
ನವದೆಹಲಿ: ಭಾರತದೊಂದಿಗೆ ಹಗೆತನ ಸಾಧಿಸಲು ಪಾಕಿಸ್ತಾನ ಬಯಸುವುದಿಲ್ಲ ಎಂದು ಹೇಳಿರುವ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್, ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಉಭಯ ರಾಷ್ಟ್ರಗಳೂ ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.
ಭಾರತ-ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಬ್ದುಲ್ ಬಸಿತ್, ಉಭಯ ರಾಷ್ಟ್ರಗಳ ನಡುವೆ ಗಂಭೀರ ಸಮಸ್ಯೆಗಳಿವೆ, ಅದನ್ನು ಅಲ್ಲಗಳೆಯಲು ಅಥವಾ ದೂರವಿಡಲು ಸಾಧ್ಯವಿಲ್ಲ. ಆದರೆ ದ್ವಿಪಕ್ಷೀಯ ಸಂಬಂಧದ ಹೊಸ ಅಧ್ಯಾಯಕ್ಕೆ ಉಭಯ ರಾಷ್ಟ್ರಗಳೂ ಮುಂದಾಗಬೇಕಿದೆ. ಪಾಕಿಸ್ತಾನ ಭಾರತದೊಂದಿಗೆ ಹಗೆತನವನ್ನು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಸಕಾರಾತ್ಮಕ ಮಾತುಕತೆ ನಡೆಸುವ ಉದ್ದೇಶ ಹೊಂದಿದೆ. ಹಾಗೆಯೇ ಭಾರತ ಸಹ ಇದಕ್ಕೆ ಪೂರಕವಾಗಿ ನಡೆದುಕೊಳ್ಳಬೇಕು ಹಾಗಾದಲ್ಲಿ ಮಾತ್ರವೇ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವೊಂದು ಪ್ರಾರಂಭವಾಗಲು ಸಾಧ್ಯ ಎಂದು ಅಬ್ದುಲ್ ಬಸಿತ್ ಅಭಿಪ್ರಾಯಪಟ್ಟಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು 19 ಭಾರತೀಯ ಯೋಧರನ್ನು ಹತ್ಯೆ ಮಾಡಿದ ಬಳಿಕ ಭಾರತ- ಪಾಕ್ ದ್ವಿಪಕ್ಷೀಯ ಸಂಬಂಧ ತೀವ್ರವಾಗಿ ಹದಗೆಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


