ಭದ್ರತೆ ವಿಡಿಯೋ ಪ್ರಕರಣ: ಲೋಕಸಭೆಯಿಂದ ಸಂಸದ ಭಗವಂತ್ ಮನ್ ಅಮಾನತು
ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಲೋಕಸಭೆಯಿಂದ ಅಮಾನತು...

ನವದೆಹಲಿ: ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮನ್ ಅವರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಆಪ್ ಸಂಸದ ಭಗವಂತ್ ಮನ್ ಅವರು ಸಂಸತ್ತಿನ ಭದ್ರತಾತ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಈ ಪ್ರಕರಣ ಸಂಸತ್ತಿನಲ್ಲಿ ಸಾಕಷ್ಟು ಕೋಲಾಹಲವನ್ನು ಎಬ್ಬಿಸಿತ್ತು. ಸಾಕಷ್ಟು ವಿರೋಧ ವ್ಯಕ್ತವಾದ ಬಳಿಕ ಭಗವಂತ್ ಮನ್ ಅವರು, ಸಂಸತ್ತಿನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದರು. ಆದರೆ ಈ ಕ್ಷಮೆಯನ್ನು ಒಪ್ಪದ ಸರ್ವ ಸದಸ್ಯರು ಮನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ಸಂಸತ್ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ನಡೆಸಿರುವ ಚಿತ್ರೀಕರಣದ ಕುರಿತಂತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ ರಚಿಸಿ ತನಿಖೆ ನಡೆಸಲು ಸೂಚಿಸಿದ್ದರು.
ಇದರಂತೆ ತನಿಖೆ ನಡೆಸಿದ್ದ ಕಿರೀಟ್ ಸೋಮಯ್ಯ ನೇತೃತ್ವದ ಸಮಿತಿ, ಭಗವಂತ್ ಮನ್ ಅವರನ್ನು ಅಮಾನತಿನಲ್ಲಿಡುವಂತೆ ಶಿಫಾರಸ್ಸು ಮಾಡಿತ್ತು. ಸಮಿತಿಯ ಶಿಫಾರಸ್ಸಿನಂತೆ ಇಂದು ನಡೆದ ಸಂಸತ್ ಕಲಾಪದಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಲೋಕಸಭೆಯಿಂದ ಭಗವಂತ್ ಮನ್ ಅವರನ್ನು ಅಮಾನತು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


