ದೆಹಲಿಯಲ್ಲಿ ದಟ್ಟ ಮಂಜು: 101 ರೈಲುಗಳ ಸಂಚಾರದಲ್ಲಿ ವಿಳಂಬ
ದೆಹಲಿಯಲ್ಲಿ ದಟ್ಟ ಮಂಜು ಕವಿದ ಪರಿಣಾಮ 101 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದ್ದು, 11 ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ...

ನವದೆಹಲಿ: ದೆಹಲಿಯಲ್ಲಿ ದಟ್ಟ ಮಂಜು ಕವಿದ ಪರಿಣಾಮ 101 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದ್ದು, 11 ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ.
ಉತ್ತರ ಭಾರತದಲ್ಲಿ ಚಳಿಯ ಹೊಡೆತಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಕೆಲ ದಿನಗಳಿಂದ ದಟ್ಟ ಮಂಜು ಹಾಗೂ ಶೀತ ವಾತಾವರಣ ಮುಂದುವರೆದ ಪರಿಣಾಮ ಇಂದು ಕೂಡ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. 11 ರೈಲುಗಳ ಸಂಚಾರ ರದ್ದು ಗೊಂಡಿದ್ದು, 18 ರೈಲುಗಳ ಸಂಚಾರ ಸಮಯವನ್ನು ಬದಲಾಯಿಸಲಾಗಿದೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ದಟ್ಟ ಮಂಜಿನ ಪ್ರಭಾವ ಬೀರಿದ್ದು, 6 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ತಡವಾಗಿವೆ. ಹಾಗೂ 6 ವಿಮಾನಗಳ ಹಾರಾಟದ ಸಮಯ ಬದಲಿಸಲಾಗಿದೆ.
ಚಂಡೀಘಡ ಹಾಗೂ ಲೂಧಿಯಾನದಲ್ಲೂ ದಟ್ಟ ಮಂಜು ಕವಿದ್ದಿದ್ದು ವಾಹನಕ್ಕೂ ಅಡಚಣೆ ಉಂಟಾಗಿದೆ. ಇನ್ನು, ದೆಹಲಿಯಲ್ಲಿ ಕನಿಷ್ಟ 11.5 ಡಿಗ್ರಿ ಸೆಲಿಯಸ್ಸ್ ಉಷ್ಣಾಂಶ ದಾಖಲಾಗಿದೆ. ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲಿಯಸ್ಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


