ದೇಶ

ಪಕ್ಷದ ನೇತೃತ್ವ ವಹಿಸಿಕೊಳ್ಳುವಂತೆ ಶಶಿಕಲಾಗೆ ಎಐಎಡಿಎಂಕೆ ಹಿರಿಯ ನಾಯಕರ ಮನವಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಂತರ ಅವರ ಆಪ್ತೆ ಶಶಿಕಲಾ ಅವರು ಪಕ್ಷದ ನೇತೃತ್ವ ವಹಿಸಿಕೊಳ್ಳುವುದು ಬಹುತೇಕ...

ಪಕ್ಷದ ನೇತೃತ್ವ ವಹಿಸಿಕೊಳ್ಳುವಂತೆ ಶಶಿಕಲಾಗೆ ಎಐಎಡಿಎಂಕೆ ಹಿರಿಯ ನಾಯಕರ ಮನವಿ
ಶಶಿಕಲಾ
Published On :
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಂತರ ಅವರ ಆಪ್ತೆ ಶಶಿಕಲಾ ಅವರು ಪಕ್ಷದ ನೇತೃತ್ವ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. 
ಎಐಎಡಿಎಂಕೆ ನಾಯಕತ್ವಕ್ಕೆ ಸಂಬಂಧಿಸಿದಂತೆ ಶನಿವಾರ ಪ್ರಮುಖ ಬೆಳವಣಿಗೆಗಳು ನಡೆದಿದ್ದು, ಪಕ್ಷದ ಅಧ್ಯಕ್ಷತೆಯ ಅಧ್ಯಕ್ಷ ಇ ಮಧುಸೂಧನನ್ ಅವರು ಸೇರಿದಂತೆ ಹಲವು ಹಿರಿಯ ನಾಯಕರು ವಿ.ಕೆ.ಶಶಿಕಲಾ ಅವರು ಪಕ್ಷದ ನೇತೃತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಇಂದು ಬೆಳಗ್ಗೆ ಜಯಲಲಿತಾ ಸಾವಿನ ನಂತರ ಪೊಯಸ್ ಗಾರ್ಡನ್ ನಿವಾಸದಲ್ಲಿ ವಾಸ್ತವ್ಯ ಹೂಡಿರುವ ಶಶಿಕಲಾ ಅವರನ್ನು ಭೇಟಿ ಮಾಡಿದ ಪಕ್ಷದ ಅನೇಕ ಮುಖಂಡರು,  ಅಮ್ಮಾ ತೋರಿದ ಹಾದಿಯಲ್ಲಿ ಪಕ್ಷವನ್ನು ಮುನ್ನಡೆಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಆದಷ್ಟು ಬೇಗ ಪಕ್ಷದ ನಾಯಕತ್ವ ವಹಿಸಿಕೊಂಡು ಅನಗತ್ಯ ವದಂತಿಗಳಿಗೆ ಬ್ರೇಕ್ ಹಾಕುವಂತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಐಎಡಿಎಂಕೆ, ಶಶಿಕಲಾ ಅವರ ಆಯ್ಕೆಯನ್ನು ಪಕ್ಷದ ಹಿರಿಯ ಮುಖಂಡರು ಬೆಂಬಲಿಸಿರುವುದಾಗಿ ತಿಳಿಸಿದೆ. ಪಕ್ಷದ ಮುಖಂಡರು ಶಶಿಕಲಾ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಅವರು ಪಕ್ಷದ ಮುಖ್ಯ ಸದಸ್ಯರಲ್ಲವೇ? ಜಯಲಲಿತಾರ ಕೊನೆಯುಸಿರಿರುವ ವರೆಗೆ ಶಶಿಕಲಾ ಜತೆಗಿದ್ದರು ಎಂದು ಪಕ್ಷದ ಸಂಘಟನಾ ಕಾರ್ಯದರ್ಶಿ ಸಿ ಪೊನ್ನಯ್ಯನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.