ಸುಷ್ಮಾ ಸ್ವರಾಜ್ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ದೆಹಲಿಯ ಅಖಿಲ...

Published On :
ನವದೆಹಲಿ: ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್)ಯಲ್ಲಿ ಶನಿವಾರ ನಡೆದ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
ಆಸ್ಪತ್ರೆ ಮೂಲಗಳ ಪ್ರಕಾರ, ಇಂದು ಬೆಳಗ್ಗೆ 8.30ಕ್ಕೆ ಆರಂಭವಾದ ಶಸ್ತ್ರಚಿಕಿತ್ಸೆ ಮಧ್ಯಾಹ್ನ 2:30ಕ್ಕೆ ಅಂತ್ಯಗೊಂಡಿದೆ. ಏಮ್ಸ್ ನ ನಿರ್ದೇಶಕರಾದ ಎಂಸಿ ಮಿಶ್ರಾ ಹಾಗೂ ತಜ್ಞರಾದ ವಿ.ಕೆ. ಬನ್ಸಾಲ್ ಮತ್ತು ಸಂದೀಪ್ ಅಗರ್ ವಾಲ್ ನೇತೃತ್ವದ ತಂಡ ಸುದೀರ್ಘ ಅವಧಿಯ ಶಸ್ತ್ರಚಿಕಿತ್ಸೆ ನಡೆಸಿದೆ. ಶಸ್ತ್ರ ಚಿಕಿತ್ಸೆಯ ನಂತರ ಸುಷ್ಮಾ ಸ್ವರಾಜ್ ಅವರಿಗೆ ತೀವ್ರ ನಿಗಾ ಘಟಕದಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ.
ಸುಷ್ಮಾ ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಆಪ್ತ ವಲಯದಲ್ಲಿ ಸೂಕ್ತ ದಾನಿ ಸಿಗದ ಕಾರಣ ಸಂಬಂಧಿಯಲ್ಲದ ಒಬ್ಬರಿಂದ ಮೂತ್ರಪಿಂಡ ದಾನ ಪಡೆಯಲಾಗಿದೆ.
ನ.16 ರಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 64 ವರ್ಷದ ಸುಷ್ಮಾ ಸ್ವರಾಜ್ ಅವರು ದೀರ್ಘಾವಧಿ ಮಧುಮೇಹದಿಂದ ಬಳಲುತ್ತಿದ್ದು, ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೂ ಮುನ್ನ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


