ದೇಶ

ಬಿಹಾರ: ಕಂದಕಕ್ಕೆ ಉರುಳಿದ ಬಸ್ - 5 ಸಾವು, 25 ಜನರಿಗೆ ಗಾಯ

ಬಿಹಾರ ರಾಜ್ಯದ ನಳಂದ ಜಿಲ್ಲೆಯಲ್ಲಿ ಕಂದಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ...

ಬಿಹಾರ: ಕಂದಕಕ್ಕೆ ಉರುಳಿದ ಬಸ್ - 5 ಸಾವು, 25 ಜನರಿಗೆ ಗಾಯ
Published On :

ನಳಂದ (ಬಿಹಾರ): ಬಿಹಾರ ರಾಜ್ಯದ ನಳಂದ ಜಿಲ್ಲೆಯಲ್ಲಿ ಕಂದಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ನಳಂದ ಜಿಲ್ಲೆಯ ಬೈಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ಜಾಧು ಬೀಘಾದಲ್ಲಿ ಕಳೆದ ರಾತ್ರಿ ಬಸ್ ಪಲ್ಟಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ ಬಸ್ ನಲ್ಲಿ ಐವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಚರಣೆಯನ್ನು ಕೈಗೊಂಡಲು, ಕಂದಕಕ್ಕೆ ಉರುಳಿ ಬಿದ್ದಿದ್ದ ಬಸ್ ನ್ನು ಕ್ರೇನ್ ಮೂಲಕ ಮೇಲೆಕ್ಕೆತ್ತಿದರು. ಮೃತ ದೇಹಗಳನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ ರು. 4 ಲಕ್ಷ ಪರಿಹಾರ ಹಣವನ್ನು ಘೋಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.