ಚಿತ್ರಮಂದಿರದಲ್ಲಿ ಎದ್ದುನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸದ ಯುವಕನ ಮೇಲೆ ಹಲ್ಲೆ
ಚೆನ್ನೈನ ಚಿತ್ರಮಂದಿರವೊಂದರಲ್ಲಿ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ ಕೆಲ ಯುವಕರು ಎದ್ದುನಿಂತು ಗೌರವಿಸಲಿಲ್ಲ. ಇದರಿಂದ...

Published On :
ಚೆನ್ನೈ: ಚೆನ್ನೈನ ಚಿತ್ರಮಂದಿರವೊಂದರಲ್ಲಿ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ ಕೆಲ ಯುವಕರು ಎದ್ದುನಿಂತು ಗೌರವಿಸಲಿಲ್ಲ. ಇದರಿಂದ ಆಕ್ರೋಶಗೊಂಡ ಮತ್ತೊಂದು ಗುಂಪು ಆ ಯುವಕರ ಮೇಲೆ ಹಲ್ಲೆಗೆ ಯತ್ನಿಸಿದೆ ಎಂದು ಭಾನುವಾರ ಆರೋಪಿಸಲಾಗಿದೆ.
ಈ ಸಂಬಂಧ ಕಳೆದ ನವೆಂಬರ್ 30ರಂದು ಮಹತ್ವದ ಆದೇಶ ಹೊರಡಿಸಿದ್ದ ಸುಪ್ರೀಂ ಕೋರ್ಟ್, ದೇಶಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲೂ ಚಿತ್ರ ಆರಂಭವಾಗುವ ಮುನ್ನ ರಾಷ್ಟ್ರಗೀತೆ ಪ್ರಸಾರವಾಗಬೇಕು ಮತ್ತು ಈ ವೇಳೆ ಎಲ್ಲಾ ಪ್ರೇಕ್ಷಕರು ಎದ್ದುನಿಂತು ಗೌರವ ಸಲ್ಲಿಸಬೇಕು ಎಂದು ತೀರ್ಪು ನೀಡಿತ್ತು.
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಚೆನ್ನೈನ ಕಸಿ ಚಿತ್ರಮಂದಿರದಲ್ಲಿ ಯುವಕರ ಗುಂಪೊಂದು ರಾಷ್ಟ್ರಗೀತೆಗೆ ಅಗೌರವ ತೋರಿದ ಘಟನೆ ನಡೆದಿದೆ.
ಮಧ್ಯಂತರ ವಿರಾಮದ ವೇಳೆ ಎದ್ದುನಿಂತು ಗೌರವ ಸಲ್ಲಿಸದ ಯುವಕರನ್ನು ವಿಜಯ್ ಕುಮಾರ್ ಎಂಬುವವರು ಪ್ರಶ್ನಿಸಿದ್ದು, ಈ ವೇಳೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಅಲ್ಲದೆ ವಿಜಯ್ ಕುಮಾರ್ ಅವರು ತನ್ನನ್ನು ಎಳೆದಾಡಿ, ಹಿಂಬದಿಯಿಂದ ಹಲ್ಲೆ ನಡೆಸಿರುವುದಾಗಿ ಎಸ್ ವಿಜಿ ಎಂಬುವವರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


