ದೇಶ

ಉತ್ತರ ಭಾರತದಲ್ಲಿ ಮುಂದುವರೆದ ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ಉತ್ತರ ಭಾರತದ ಹಲವೆಡೆ ಭಾನುವಾರ ಕೂಡ ದಟ್ಟ ಮಂಜಿನ ವಾತಾವಾರಣ ಮುಂದುವರೆದಿದ್ದು, ಮಂಜಿ ಕವಿದ ವಾತಾವರಣ ಹಿನ್ನೆಲೆಯಲ್ಲಿ ಹಲವೆಡೆ ರೈಲು ಹಾಗೂ ವಿಮಾನ ಸಂಚಾರಗಳಲ್ಲಿ ವ್ಯತ್ಯಯ ಉಂಟಾಗಲಿದೆ...

ಉತ್ತರ ಭಾರತದಲ್ಲಿ ಮುಂದುವರೆದ ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸಂಗ್ರಹ ಚಿತ್ರ
Published On :

ನವದೆಹಲಿ: ಉತ್ತರ ಭಾರತದ ಹಲವೆಡೆ ಭಾನುವಾರ ಕೂಡ ದಟ್ಟ ಮಂಜಿನ ವಾತಾವಾರಣ ಮುಂದುವರೆದಿದ್ದು, ಮಂಜಿ ಕವಿದ ವಾತಾವರಣ ಹಿನ್ನೆಲೆಯಲ್ಲಿ ಹಲವೆಡೆ ರೈಲು ಹಾಗೂ ವಿಮಾನ ಸಂಚಾರಗಳಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ.

ರಾಜಧಾನಿ ದೆಹಲಿಯಲ್ಲಿ ನಿನ್ನೆ ಸಂಜೆಯಿಂದಲೂ ಮಂಜು ಕವಿದ ವಾತಾವರಣ ಮುಂದುವರೆದಿದೆ. ಬೆಳಗಿನ ಜಾವ ಸಂದರ್ಭದಲ್ಲಿ ದಟ್ಟ ಮಂಜು ಆವರಿಸಿರುವುದರಿಂದಾಗಿ ಹಲವೆಡೆ ರಸ್ತೆ ಹಾಗೂ ರೈಲು, ವಿಮಾನ ಸಂಚಾರಗಳಲ್ಲಿ ವ್ಯತ್ಯಯ ಉಂಟಾಗಿದೆ.

ಮಂಜಿನ ವಾತಾವರಣದಿಂದಾಗಿ ರಸ್ತೆಗಳು ಸ್ಪಷ್ಟವಾಗಿ ಕಾಣದ ಕಾರಣ ಹೆದ್ದಾರಿಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿದ್ದು, ಪರಿಣಾಮ ದೆಹಲಿಯ ಹಲವೆಡೆ ಸಂಚಾರ ದಟ್ಟಣೆ ಕೂಡ ಉಂಟಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, 90 ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಮುಂದಾಗಿದ್ದು, 28 ರೈಲುಗಳ ಸಂಚಾರ ವೇಳಾಪಟ್ಟಿಯನ್ನು ಬದಲಿಸಲಾಗಿದ್ದು, 4 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.

ದಟ್ಟ ಮಂಜಿನಿಂದಾಗಿ ವಿಮಾನಗಳ ಹಾರಾಟದಲ್ಲೂ ವ್ಯತ್ಯಯಗಳು ಕಂಡುಬಂದಿದ್ದು, 1 ಅಂತರಾಷ್ಟ್ರೀಯ ಹಾಗೂ 7 ದೇಶೀಯ ವಿಮಾಗಳು ತಡವಾಗಿ ತನ್ನ ಹಾರಾಟವನ್ನು ಆರಂಭಿಸಲಿದೆ. 4 ವಿಮಾನಗಳ ಹಾರಾಟವನ್ನು ಈಗಾಗಲೇ ರದ್ದು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.