ಈಶಾನ್ಯ ರಾಜ್ಯಗಳಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲು
ಈಶಾನ್ಯ ರಾಜ್ಯಗಳಲ್ಲಿ ಡಿ.12 ರಂದು ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On :
ಶಿಲ್ಲಾಂಗ್: ಈಶಾನ್ಯ ರಾಜ್ಯಗಳಲ್ಲಿ ಡಿ.12 ರಂದು ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ತೀವ್ರತೆ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ಈ ವರೆಗೂ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಬೆಳಿಗ್ಗೆ 7.27 ರ ವೇಳೆಗೆ ಭೂಕಂಪ ಸಂಭವಿಸಿದ್ದು, ಮೇಘಾಲಯದ ವೆಸ್ಟ್ ಖಾಸಿ ಹಿಲ್ ನಲ್ಲಿ ಭೂಕಂಪದ ಕೇಂದ್ರ ದಾಖಲಾಗಿದೆ ಎಂದು ಪ್ರಾದೇಶಿಕ ಭೂಕಂಪಶಾಸ್ತ್ರೀಯ ಪ್ರಯೋಗಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳನ್ನು ವಿಶ್ವದ ಅತಿ ಹೆಚ್ಚು ಭೂಕಂಪನ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


