ವರ್ಧಾ ಚಂಡಮಾರುತ: ಕಲ್ಪಕ್ಕಮ್ ಪರಮಾಣು ಘಟಕದ ರಕ್ಷಣೆಗೆ ಎಲ್ಲಾ ಕ್ರಮ
ತಮಿಳುನಾಡಿನಲ್ಲಿ ವರ್ಧಾ ಚಂಡಮಾರುತ ತೀವ್ರವಾಗಿ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಕಲ್ಪಕ್ಕಮ್...

Published On :
ನವದೆಹಲಿ:ತಮಿಳುನಾಡಿನಲ್ಲಿ ವರ್ಧಾ ಚಂಡಮಾರುತ ತೀವ್ರವಾಗಿ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಕಲ್ಪಕ್ಕಮ್ ಪರಮಾಣು ಘಟಕದ ಸುರಕ್ಷತೆಗೆ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ವರ್ಧಾ ಚಂಡಮಾರುತದಿಂದಾಗಿ ಪರಮಾಣು ಸ್ಥಾವರಕ್ಕೆ ಯಾವುದೇ ರೀತಿಯ ಹಾನಿಯುಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಇಲ್ಲಿಯವರೆಗೆ ಸ್ಥಾವರ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಹವಾಮಾನ ಇಲಾಖೆ ಜೊತೆ ಘಟಕ ಸಂಪರ್ಕವನ್ನು ಹೊಂದಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ.
ಕಂಚೀಪುರಂನಲ್ಲಿ ಕಲ್ಪಕಂ ಇದೆ. ಚಂಡಮಾರುತದಿಂದಾಗಿ ಚೆನ್ನೈ, ತಿರುವಲ್ಲೂರು, ವಿಲ್ಲುಪುರಂ ಸೇರಿದಂತೆ ಉತ್ತರ ತಮಿಳುನಾಡಿನಲ್ಲಿ ಭಾರೀ ಮಳೆ ಬೀಳುತ್ತಿದ್ದು ಬಿರುಗಾಳಿಯು ಅವ್ಯಾಹತವಾಗಿದೆ.
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾದ ಎರಡು ಪರಮಾಣು ಘಟಕಗಳಿದ್ದು ಅವುಗಳಲ್ಲಿ 440 ಮೆಗಾ ವ್ಯಾಟ್ ಮತ್ತು ಇನ್ನೊಂದು ಘಟಕದಲ್ಲಿ 500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತವೆ.
ವರ್ಧಾ ಚಂಡಮಾರುತದ ವೇಗ ಗಂಟೆಗೆ 110ರಿಂದ 120 ಕಿಲೋ ಮೀಟರ್ ವೇಗದಲ್ಲಿದೆ.
ಜನರು ಮನೆಯೊಳಗೆ ಇರುವಂತೆ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ಪಡೆ ಮುನ್ನೆಚ್ಚರಿಕೆ ನೀಡಿದೆ. ತಮಿಳುನಾಡು ಮತ್ತು ಆಂಧ್ರ ಪ್ರದೇಶದ ತೀರಗಳಲ್ಲಿ ರಾಷ್ಟ್ರೀಯ ವಿಪತ್ತು ಪಡೆಯ 19 ತಂಡಗಳನ್ನು ನಿಯೋಜಿಸಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ: ದಕ್ಷಿಣ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಭಾಗಗಳ ಮೀನುಗಾರರಿಗೆ ಇನ್ನು ಎರಡು ದಿನಗಳವರೆಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ತಮಿಳುನಾಡಿನ ತೀರ ಪ್ರದೇಶದಲ್ಲಿರುವ 7,354 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಮತ್ತು 54 ನಿರಾಶ್ರಿತ ಕೇಂದ್ರಗಳಿಗೆ ಕಳುಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


