ದೇಶ

ಪಾಕ್ ಕಲಾವಿದರ ಬಗ್ಗೆ ಮೋದಿ ಟ್ರಂಪ್ ಮಾದರಿ ಅನುಸರಿಸುತ್ತಾರಾ?: ಶಿವಸೇನೆ

ಪ್ರಧಾನಿ ನರೇಂದ್ರ ಮೋದಿ ಪಾಕ್ ಕಲಾವಿದರ ವಿಷಯದಲ್ಲಿ ಕಠಿಣ ನಿಲುವು ತೆಗೆದುಕೊಳ್ಳುತ್ತಾರಾ ಎಂದು ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಕೇಳಿದೆ.

ಪಾಕ್ ಕಲಾವಿದರ ಬಗ್ಗೆ ಮೋದಿ ಟ್ರಂಪ್ ಮಾದರಿ ಅನುಸರಿಸುತ್ತಾರಾ?: ಶಿವಸೇನೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
Published On :
ಮುಂಬೈ: ದೇಶದ ಜನತೆಯ ಕೆಲಸವನ್ನು ವಿದೇಶಿಗರು ಕಸಿದುಕೊಳ್ಳುವುದಕ್ಕೆ ಕಡಿವಆಣ ಹಾಕಲು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ನಿರ್ಧಾರ ತೆಗೆದುಕೊಂಡಂತೆ, ಪ್ರಧಾನಿ ನರೇಂದ್ರ ಮೋದಿ ಪಾಕ್ ಕಲಾವಿದರ ವಿಷಯದಲ್ಲಿ ಕಠಿಣ ನಿಲುವು ತೆಗೆದುಕೊಳ್ಳುತ್ತಾರಾ ಎಂದು ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಕೇಳಿದೆ. 
ಪಾಕಿಸ್ತಾನದ ಕಲಾವಿದರು ಹಣಗಳಿಸಲು ಭಾರತಕ್ಕೆ ಆಗಮಿಸುತ್ತಾರೆ. ಇದರಿಂದ ಸ್ಥಳೀಯರು ಕೆಲಸ ಕಳೆದುಕೊಳ್ಳುವಂತಾಗುತ್ತಿದೆ. ಆದ್ದರಿಂದ ಭಾರತದಲ್ಲೂ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡಂತಹ ನಿರ್ಧಾರವನ್ನು ಕೈಗೊಳ್ಳಲು ಸಾಧ್ಯವೇ ಎಂದು ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ಪ್ರಶ್ನೆ ಮಾಡಿದೆ. 
ಡೊನಾಲ್ಡ್ ಟ್ರಂಪ್ ಅಮೆರಿಕಾದಲ್ಲಿ ವಿದೇಶಿಗರಿಗೆ ಅಲ್ಲಿನ ಸ್ಥಳೀಯರ ಕೆಲಸಗಳನ್ನು ಆಕ್ರಮಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅದೇ ಮಾದರಿಯಲ್ಲಿ ಭಾರತದಲ್ಲಿ ಪಾಕಿಸ್ತಾನಿ ಕಲಾವಿದರಿಗೆ ಅವಕಾಶವಿಲ್ಲ ಎಂಬ ನಿಲುವನ್ನು  ಪ್ರಕಟಿಸಬೇಕು ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ. ಡೊನಾಲ್ಡ್ ಟ್ರಂಪ್ ಅವರಂತೆಯೇ ಮಾಡುವ ಸಾಮರ್ಥ್ಯ ನಮ್ಮ ಪ್ರಧಾನಿ ಮೋದಿ ಅವರಿಗೂ ಇದೆ ಎಂದು ಶಿವಸೇನೆ ವಿಶ್ವಾಸ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.